ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ, ಚಿತ್ರದುರ್ಗ ನಗರದಲ್ಲಿ ನಡೆದ ಶ್ರೀ ನಾಡ ದೊರೆ ರಾಜವೀರ ಮದಕರಿ ನಾಯಕ ಜಯಂತ್ಯೋತ್ಸವದ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಚಿತ್ರದುರ್ಗದ ಕನಕ ವೃತ್ತದಿಂದ ಪ್ರಾರಂಭವಾದ ಶ್ರೀ ನಾಡದೊರೆ ರಾಜವೀರ ಮದಕರಿ ನಾಯಕರವರ ಜಯಂತಿಯ ಅಂಗವಾಗಿ ರಾಜನಹಳ್ಳಿ ಶ್ರೀ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಮೆರವಣಿಗೆಗೆ ಚಾಲನೆ ನೀಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ ರವರು, ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷರಾದ ಚಂದ್ರಪ್ಪ, ನಗರಸಭೆ ಸದಸ್ಯರಾದ KC ನಾಗರಾಜ್ , ವೀರೇಂದ್ರ ಸಿಂಹ, ಭೋರಾನಾಯಕ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ನಾಯಕ ಸಮುದಾಯದ ಯುವ ಮುಖಂಡರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!