ಚಿತ್ರದುರ್ಗ : ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ನೂತನವಾಗಿ ಎಂಬಿಬಿಎಸ್ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವೈಟ್ ಕೋಟ್ ಸಮಾರಂಭವು ನಡೆಯಿತು.
ಸಮಾರಂಭವನ್ನು ಜಿ¯್ಲÁ ನ್ಯಾಯಾದೀಶರು ಹಾಗು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿಯಾದ ಶ್ರೀಮತಿ ಬಿ.ಎಸ್. ರೇಖಾರವರು ಉದ್ಘಾಟಿಸಿ, ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶುಭ ಕೋರಿ, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿಗಳು ಯಾವುದೇ ರ‍್ಯಾಗಿಂಗ್ ಭಯವಿಲ್ಲದೇ ಅತ್ಯುತ್ತಮ ಶ್ರೇಣಿಯ ವಿದ್ಯಾಭ್ಯಾಸ ಪಡೆಯಬಹುದೆಂದರು.
ಉತ್ತಮ ಮೂಲಭೂತ ಸೌಕರ್ಯ ಹಾಗು ನುರಿತ ಪ್ರಾದ್ಯಾಪಕರನ್ನು ಹೊಂದಿರುವ ಈ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉತ್ತಮ ವೈದ್ಯರಾಗಿ ಸಮಾಜ ಸೇವೆ ಮಾಡಲೆಂದು ಹಾರೈಸಿದರು.
ಸಮಾರಂಭದಲ್ಲಿ ಡಾ. ರಾಜೇಶ್, ಡಾ. ಶ್ರೀಷ ಪಾಟೀಲ ಹಾಗೂ ಡಾ. ನಾಗೇಂದ್ರ ಗೌಡ ಎಂ.ಆರ್. ವಿವಿಧ ವಿಷಯಗಳ ಬಗ್ಗೆ ಉಪನ್ಯಾಸ ನೀಡಿದರು. ಎಸ್‌ಜೆಎಂ ವಿದ್ಯಾಪೀಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭರತ್‌ಕುಮಾರ್, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಪ್ರಶಾಂತ್, ಉಪವೈದ್ಯಕೀಯ ನಿರ್ದೇಶಕರಾದ ಡಾ. ರಮೇಶ್ ಹಾಗೂ ಮಾನವ ಸಂಪನ್ಮೂಲಾಧಿಕಾರಿಗಳಾದ ಶ್ರೀಮತಿ ವಿಜಯಮಠ, ವೈದ್ಯಕೀಯ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರು ಇದ್ದರು.