ಚಳ್ಳಕೆರೆ : ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ನವಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅ.19ರ ಬೆಳಗ್ಗೆ 12.30 ಕ್ಕೆ ಸರಿಯಾಗಿ ತಾಲೂಕು ಕಚೇರಿ ಸಭಾಂಗಣದಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆದಿದ್ದು ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಯಶಸ್ವಿಗೆ ಪಾತ್ರರಾಗುವಂತೆ ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.