ಚಳ್ಳಕೆರೆ: ಖಾಸಗಿ ಶಾಲೆಗಳಿಗೆ ಕರೆ ತರುವ ವಾಹನಗಳ ಮೇಲೆ ಆಂಗ್ಲ ಭಾಷೆಯಲ್ಲಿ ತಮ್ಮ ಶಾಲೆಗಳ ಹೆಸರುಗಳನ್ನು ಬರೆಸುತ್ತಿರುವುದು ಅತ್ಯಂತ ಖಂಡನೀಯ ವಿಷಧನೀಯವಾಗಿದೆ ಬರುವ ನವೆಂಬರ್ 10ರ ಒಳಗೆ ಎಲ್ಲಾ ಖಾಸಗಿ ಹಾಗೂ ಅನುದಾನಿತ ಶಾಲಾ ಆಡಳಿತ ಮಂಡಳಿ ತಮ್ಮ ವಾಹನಗಳ ಮೇಲೆ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಶಾಲೆಗಳ ಹೆಸರುಗಳನ್ನು ಬರೆಸಬೇಕು ಇಲ್ಲದಿದ್ದಲ್ಲಿ ವಾಹನಗಳಿಗೆ ಕಪ್ಪು ಮಸಿ ಬಳಿದು ಪ್ರತಿಭಟಿಸಲಾಗುವುದು ಎಂದು ಕನ್ನಡ ರಕ್ಷಣಾ ಮತ್ತು ಸಂಸ್ಕೃತಿಕ ವೇದಿಕೆ ಸದಸ್ಯ ಹಾಗೂ ಸಾಹಿತಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಎಚ್ಚರಿಕೆ ನೀಡಿದರು.ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸ್ಥಾಪಿತವಾಗಿರುವ ಖಾಸಗಿ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳ ಪ್ರಯಾಣಕ್ಕೆ ಬಳಸುತ್ತಿರುವ ವಾಹನಗಳ ಮೇಲೆ ತಮ್ಮ ವಿದ್ಯಾ ಸಂಸ್ಥೆ ಹೆಸರುಗಳನ್ನು ಆಂಗ್ಲ ಭಾಷೆಯಲ್ಲಿ ಬರೆಸಿರುವುದು ನಮ್ಮ ನೆಲವನ್ನು ಆಂಗ್ಲದ ನೆಲವನ್ನಾಗಿ ಮಾಡುವ ಖಂಡಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು ಮಕ್ಕಳಲ್ಲಿ ಕನ್ನಡ ಭಾಷೆ ಅಭಿಮಾನ ಬೆಳೆಯಲು ಮೊದಲು ತಮ್ಮ ಮನೆಗಳಲ್ಲಿ ಕನ್ನಡ ಮಾತನಾಡುವ ಮೂಲಕ ಭಾಷಾಭಿಮಾನವನ್ನು ಬೆಳೆಸಬೇಕು ಇತ್ತೀಚಿನ ದಿನಗಳಲ್ಲಿ ದಿನಗೂಲಿ ಮಾಡುವ ನೌಕರರು ಸಹ ತಮ್ಮ ಮಕ್ಕಳಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಕೊಡಿಸಲು ಮುಂದಾಗುತ್ತಿದ್ದಾರೆ, ತಮ್ಮ ಸ್ವಂತ ಕನ್ನಡ ಭಾಷೆಯನ್ನು ಮರೆತು ಬೇರೊಂದು ಭಾಷೆಯ ವ್ಯಾಮೋಹಕ್ಕೆ ಒಳಗಾಗುತ್ತಿರುವುದು ನೋವಿನ ಸಂಗತಿಯಾಗಿದೆ ಎಂದರು.ಇನ್ನೂ ಸಾಮಾಜಿಕ ಹೋರಾಟಗಾರ ಹೆಚ್‌ಎಸ್.ಸೈಯದ್‌ಮಾತನಾಡಿ,ಕನ್ನಡ ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ಕೇವಲ ಶಾಲಾ-ಕಾಲೇಜುಗಳಲ್ಲದೆ ಪೋಷಕರಿಗೂ ಜವಾಬ್ದಾರಿ ಇರಬೇಕು ಕೇವಲ ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರ ಮಕ್ಕಳು ಬುದ್ಧಿವಂತರಾಗುತ್ತಾರೆ ಎಂಬ ಮನೋಭಾವದಿಂದ ಹೊರ ಬಂದಾಗ ಮಾತ್ರ ಕನ್ನಡ ಭಾಷೆ ಉಳಿಯಲು ಸಾಧ್ಯ ಕನ್ನಡಪರ ಸಂಘಟನೆಗಳು ಕೇವಲ ನವೆಂಬರ್ ತಿಂಗಳಿಗೆ ತಮ್ಮ ಕನ್ನಡ ಪರ ಹೋರಾಟಗಳನ್ನು ಸೀಮಿತಗೊಳಿಸದೆ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಭಾಷೆಯ ಬಗ್ಗೆ ಅರಿವನ್ನು ಮೂಡಿಸುವ ಜವಾಬ್ದಾರಿ ಹೊರಬೇಕು ಎಂದರು.ಮನವಿ ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಮಾತನಾಡಿ ಸರ್ಕಾರ ಕನ್ನಡ ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ರೂಪಿಸಿದೆ ಈ ವಿಷಯಕ್ಕೆ ಸಂಬAಧಪಟ್ಟAತೆ ಸಂಬAಧ ಪಟ್ಟ ಶಾಲೆಗಳೊಂದಿಗೆ ತುರ್ತು ಸಭೆ ನಡೆಸಿ ಮನವರಿಕೆ ಮಾಡಿ ಕೊಟ್ಟು ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗುವುದು ಎಂದರು.ಈ ಸಂದರ್ಭದಲ್ಲಿ ವೇದಿಕೆಯ ಸದಸ್ಯರಾದ ಹೆಚ್,ನಾಗೇಂದ್ರಪ್ಪ, ತಿಪ್ಪೇಶ್, ರಮೇಶ್, ನಾಗರಾಜ್, ಹೆಚ್.ಮಹಾಂತೇಶ್, ಚಂದ್ರಶೇಖರ್, ಜಿಎನ್ ವೀರಣ್ಣರೆಡ್ಡಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Namma Challakere Local News
error: Content is protected !!