ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಸೋಮಗುದ್ದು ಗ್ರಾಮದ ಗ್ರಾಮ ಪಂಚಾಯಿತಿ ಕಛೇರಿ ಆವರಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ತಾಲ್ಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ಸೋಮಗುದ್ದು ಇವರ ಸಹಯೋಗದೊಂದಿಗೆ ಸೋಮಗುದ್ದು ಗ್ರಾಮ ಪಂಚಾಯಿತಿ ಕಛೇರಿ ಆವರಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವಂತೆ ಸಂಭಂದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ರೇಹಾನ್ ಪಾಷಾ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿದರ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಹೋನೂರಪ್ಪ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಮುಖಂಡರುಗಳಾದ ಏಕಾಂತಪ್ಪ, ರೈತ ಸಂಘದ ರಂಗಸ್ವಾಮಿ, ಮಲ್ಲಿಕಾರ್ಜುನ, ಶ್ರೀನಿವಾಸ್, ಅಜಿತ್, ಸತೀಶ್ ಬಾಬು, ಮುಖಂಡರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.