ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಕಛೇರಿ ಆವರಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಚಳ್ಳಕೆರೆ ತಾಲ್ಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ರಾಮಾಜೋಗಿಹಳ್ಳಿ ಇವರ ಸಹಯೋಗದೊಂದಿಗೆ ರಾಮಜೋಗಿಹಳ್ಳಿ ಗ್ರಾಮ ಪಂಚಾಯಿತಿ ಕಛೇರಿ ಆವರಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವಂತೆ ಸಂಭಂದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ರೇಹಾನ್ ಪಾಷಾ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿದರ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಧಾ ಉಮಾಕಾಂತ ರೆಡ್ಡಿ, ಉಪಾಧ್ಯಕ್ಷರಾದ ಸುಧಮ್ಮ ಚಂದ್ರಪ್ಪ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ತಿಪ್ಪೇಶ್ ರೆಡ್ಡಿ, ಮುಖಂಡರುಗಳಾದ ಸುರೇಶ್ ಬಾಬು , ಪುರುಷೋತ್ತಮ್, ಮುಖಂಡರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!