ಚಳ್ಳಕೆರೆ : ಒನಕೆ ಓಬವ್ವರ ಹೆಸರು ಚಿತ್ರದುರ್ಗದ ಇತಿಹಾಸದಲ್ಲಿ ಮರೆಯಲಾಗದ್ದು. ಅವರನ್ನು ಕರ್ನಾಟಕದ ವೀರವನಿತೆಯರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ನಗರದ ತಾಲೂಕು ಕಛೇರಿಯಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ವೀರ ಓನಕೆ ಓಬವ್ವ ಜಯಂತಿಯಲ್ಲಿ ಓನಕೆ ಓಬವ್ವ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಕನ್ನಡ ಚಿತ್ರರಂಗದಲ್ಲಿ ಓಬವ್ವ ಸ್ಮರಣೆ ಕೂಡ ಹೌದು, ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಚಿತ್ರದಲ್ಲಿನ ಪ್ರಸಿದ್ಧ ಹಾಡಿನಲ್ಲಿ ಅವರ ವೀರೋಚಿತ ಪ್ರಯತ್ನವನ್ನು ಚಿತ್ರಿಸಲಾಗಿದೆ. ಈ ಚಿತ್ರದಲ್ಲಿ ನಟಿ ಜಯಂತಿ (ನಟಿ) ಅವರು ಓಬವ್ವನ ಪಾತ್ರ ಮಾಡಿದ್ದರು. 2019ರಲ್ಲಿ ಚಿತ್ರದುರ್ಗದ ಒನಕೆ ಓಬವ್ವ ಎನ್ನುವ ಸಿನಿಮಾದಲ್ಲಿ ತಾರಾ ಅನುರಾಧಾ ಅವರು ಒನಕೆ ಓಬವ್ವನಾಗಿ ಅಭಿನಯಿಸಿದ್ದಾರೆ ಎಂದು ಮೆಲುಕು ಹಾಕದ ಅವರು ಈಗೀನ ಯುವ ಪೀಳಿಗೆಯ ಮಹಿಳೆಯರಿಗೆ ಮಾದರಿಯಾಗಿದ್ದಾರೆ ಎಂದರು.
ಪ್ರಾಸ್ತವಿಕವಾಗಿ ಮಾತನಾಡಿದ ತಹಶೀಲ್ದಾರ್ ರೇಹಾನ್ ಪಾಷ, ಒನಕೆ ಓಬವ್ವ 18ನೆಯ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಇವರನ್ನು ಕನ್ನಡ ನಾಡಿನ ವೀರವನಿತೆಯರಾದ ಕಿತ್ತೂರು ಚೆನ್ನಮ್ಮ,ರಾಣಿ ಅಬ್ಬಕ್ಕರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ. ಒನಕೆ ಓಬವ್ವ ಹೈದರಾಲಿಯು ಚಿತ್ರದುರ್ಗದ ಮೇಲೆ ಹಟಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವೆಯು ತನ್ನ ಒನಕೆಯನ್ನು ಅಸ್ತ್ರವಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದಳು. ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದು ಕೊನೆಯಲ್ಲಿ ಎದುರಾಳಿಯು ಬೆನ್ನಹಿಂದೆ ಬಂದದ್ದನ್ನು ಗಮನಿಸಲಾಗದೆ ಶತ್ರುವಿನ ಕತ್ತಿಗೆ ಬಲಿಯಾದರು. ಅಂದಿನಿAದ ಅವರಿಗೆ ಒನಕೆ ಓಬವ್ವ ಎಂದು ಬಿರುದು ಸಿಕ್ಕಿತು ಎಂದರು.

ಈದೇ ಸಂಧರ್ಭದಲ್ಲಿ ನಗರಸಭೆ ಸದಸ್ಯ ಕೆ.ವೀರಭದ್ರಪ್ಪ, ರಮೇಶ್‌ಗೌಡ, ತಹಶೀಲ್ದಾರ್ ರೇಹಾನ್ ಪಾಷ, ನಗರಸಭೆ ಪೌರಾಯುಕ್ತ ಸಿ.ಚಂದ್ರಪ್ಪ, ಪಶು ಇಲಾಖೆ ರೇವಣ್ಣ, ಮೂಡಲಗಿರಿಯಪ್ಪ, ಜೈರಾಮ್, ಶ್ರೀರಾಮರೆಡ್ಡಿ, ಎಂಡಿ.ಓಬಣ್ಣ, ಕೆಂಚಣ್ಣ, ಮಾರುತಿ, ಲಿಂಗಪ್ಪ, ಚಿದಾನಂದಮೂರ್ತಿ, ರಾಮಕೃಷ್ಣ, ಮಂಜುಳಾಮ್ಮ ದೇವರಾಜ್ ಚಿದಾನಂದ್ ಪರಮೇಶ್ವರಪ್ಪ, ಕುಷಾ, ಇತರ ಹಲವು ಮುಖಂರು ಹಾಜರಿದ್ದರು.

Namma Challakere Local News
error: Content is protected !!