ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಸರಳವಾಗಿ ವೀರ ಒನಕೆ ಓಬವ್ವ ಜಯಂತಿಯ ಕಾರ್ಯಕ್ರಮವನ್ನು ಆಚರಿಸಲಾಯಿತು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಈ ಜಯಂತಿಯಲ್ಲಿ ಒನಕೆ ಓಬವ್ವ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಕಾಂಗ್ರೇಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಜಯಂತಿಯ ಶುಭಾಷಯಗಳನ್ನು ಕೋರಿದರು.
ಇದೇ ಸಂಧರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್‌ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ರಾಜ್ಯ ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷ ಆರ್.ಪ್ರಸನ್ನಕುಮಾರ್, ಮುಖಂಡರುಗಳಾದ ಕೃಷ್ಣಮೂರ್ತಿ, ಡಾ.ಆನಂದಕುಮಾರ್, ಫರೀದ್‌ಖಾನ್, ಬಸವರಾಜ್, ಜಯಣ್ಣ, ಚೇತನ್ ಕುಮಾರ್, ರಂಗಸ್ವಾಮಿ, ಬಸವರಾಜ್, ಸುದರ್ಶನರೆಡ್ಡಿ, ಶಿವಣ್ಣ, ಗುಜ್ಜಾರಪ್ಪ, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.