ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಶ್ರೀ ಮುರುಘಾ ಶಿವಮೂರ್ತಿ ಶರಣರು ಇಂದು ಬಿಡುಗಡೆ
ಚಳ್ಳಕೆರೆ : ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಶ್ರೀ ಮುರುಘಾ ಶಿವಮೂರ್ತಿ ಶರಣರು ಬಿಡುಗಡೆ ಇಂದು ತೀವ್ರ ಕುತೂಹಲ ಮೂಡಿಸಿತ್ತು.
ಮುರುಘಾ ಶರಣರ ಬಿಡುಗಡೆ ವಿಚಾರಕ್ಕೆ ಸಂಬAಧಿಸಿದAತೆ ಇಂದು (ಗುರುವಾರ) ಡಾ.ಶಿವಮೂರ್ತಿ ಮುರುಘಾ ಶರಣರು ಬಿಡುಗಡೆಯಾಗಿದ್ದಾರೆ.
ಜಾಮೀನು ಅರ್ಜಿ ವಿಚಾರಣೆಗೆ ಸಂಬAಧಿಸಿದAತೆ ನವಂಬರ್.15 ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.
ಈ ಆದೇಶ ಪ್ರತಿಯನ್ನು ನಿನ್ನೆ ಸಂಜೆ ವೇಳೆಗೆ ಕಾರಾಗೃಹ ತಲುಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇಂದು ಪ್ರತಿಯನ್ನು ತಲುಪಿಸಿದ್ದಾರೆ. ಆದೇಶ ಪ್ರತಿಯನ್ನು ಪರಿಶೀಲಿಸಿದ ನಂತರ ಕಾರಾಗೃಹ ಅಧಿಕಾರಿಗಳು ಮುರುಘಾ ಶರಣರನ್ನು ಕಾರಾಗೃಹದಿಂದ ಬಿಡುಗಡೆ ಮಾಡಿದ್ದಾರೆ
ಮುರುಘಾ ಶರಣರು ಬಿಡುಗಡೆ ವಿಷಯ ಮೊದಲೇ ತಿಳಿದಿದ್ದರಿಂದ ಕಾರಾಗೃಹ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಹೊರಬಂದ ನಂತರ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿ ಶ್ರೀಗಳ ಪರ ಘೋಷಣೆ ಕೂಗಿ, ಜೈಕಾರ ಹಾಕಿದರು.
ಹೈಕೋರ್ಟ್ ವಿಧಿಸಿದ ಷರತ್ತಿನನ್ವಯ ಚಿತ್ರದುರ್ಗ ಮುರುಘಾ ಮಠಕ್ಕೆ ಶ್ರೀಗಳು ಪ್ರವೇಶಿಸುವಂತಿಲ್ಲ. ಆದ್ದರಿಂದ ಶ್ರೀಗಳು ದಾವಣಗೆರೆಯ ವಿರಕ್ತಮಠದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.