ಚಳ್ಳಕೆರೆ ತಾಲೂಕು ಕಚೇರಿ ಮುಂದೆ ತಾಲೂಕು ಕಾಡುಗೊಲ್ಲರ ಸಂಘ,ಕರ್ನಾಟಕ ಕಾಡುಗೊಲ್ಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ಕಾಡು ಗೊಲ್ಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ಇನ್ನೂ ನೂರಾರು ಕಾಡುಗೊಲ್ಲರು ತಾಲೂಕು ಕಛೇರಿಮುಂದೆ ಶ್ಯಾಮಿಯಾನ ಹಾಕಿಕೊಂಡು ಗಾಂಧಿ ಹಾಗೂ ಅಂಬೇಡ್ಕರ್ ಫೋಟೋ ಗಳನ್ನು ಹಿಟ್ಟು ಕೊಂಡು ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರಂಗಸ್ವಾಮಿ ಮಾತನಾಡಿ, ಡಾ ಕಾಂತರಾಜ್ ನಿಕಟಪೂರ್ವ ಹಿಂದಳಿದ ವರ್ಗಗಳ ಆಯೋಗದ ಅಧ್ಯಕ್ಷರ ವರದಿಯನ್ನು ಕೂಡಲೇ ಅನುಷ್ಠಾನಗೊಳಸ ಬೇಕು12 ಜಿಲ್ಲೆಯಗಳಲ್ಲಿ 40 ತಾಲೂಕುಗಳಲ್ಲಿ1250 ಕ್ಕೂ ಹೆಚ್ಚಿನ ಗೊಲ್ಲರಹಟ್ಟಿಗಳಲ್ಲಿ ಹಾಗೂ ಉದ್ಯೋಗ ಹಾಗೂ ವಿದ್ಯಾಭ್ಯಾಸ ಸಲುವಾಗಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸುಮಾರು 6 ರಿಂದ 8 ಲಕ್ಷ ಜನ ಸಂಖ್ಯೆ ಹೊಂದಿರುವ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದ್ದರೂ ಸಹ ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತರುವಲ್ಲಿ ಮೀನಾಮೇಷ ಎಣಿಸುತ್ತಿದೆ ಎಂದು ಆಕ್ರೋಶ ಭರಿತರಾಗಿ ತಮ್ಮ ಅಳಲನ್ನು ಸರಕಾರದ ಗಮನ ಸೆಳೆಯುವಂತೆ ಪ್ರತಿಭಟಿಸಿದರು.

ಇನ್ನೂ ಅನೇಕ ಮುಖಂಡರು ಧ್ವನಿಗೂಡಿಸಿ
ಕೂಡಲೇ ರಾಜ್ಯ ಸರ್ಕಾರ ಕಾಡುಗೊಲ್ಲ ಸಮುದಾಯಕ್ಕೆ ಎಲ್ಲಾ ತಾಲ್ಲೂಕು ಕಚೇರಿಗಳಲ್ಲೂ ಜಾತಿ ಪ್ರಮಾಣ ಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಕಾಡುಗೊಲ್ಲ ಸಂಘದ ಅಧ್ಯಕ್ಷರು ಸದಸ್ಯರು, ಜಿಲ್ಲಾ ಪಂಚಾಯತ್ , ತಾಲೂಕ ಪಂಚಾಯತ್ ಮಾಜಿ ಸದಸ್ಯರು, ನಗರಸಭೆ, ಗ್ರಾಮಪಂಚಾಯಿತಿ ಸದಸ್ಯರು ಹಾಗೂ ಕಾಡುಗೊಲ್ಲ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!