ಚಿತ್ರದುರ್ಗ: ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶ್ರೀ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಪ್ರಾಚಾರ್ಯ ಡಾ.ಭರತ್ ಪಿ ಬಿ ಮಾತನಾಡಿ, ದಾಸ ಸಾಹಿತ್ಯ, ಶರಣ ಸಾಹಿತ್ಯವನ್ನು ನಾವು ಹೆಚ್ಚಾಗಿ ಓದಬೇಕು. ದಾಸರ ಪದಗಳನ್ನು ಹಾಗೂ ಶರಣರ ವಚನಗಳನ್ನು ಆಲಿಸಿದಲ್ಲಿ ನಮ್ಮ ಮನಸ್ಸಿನ ಒತ್ತಡಗಳನ್ನು ದೂರ ಮಾಡಿಕೊಳ್ಳಬಹುದು. ದಾಸ ಶ್ರೇಷ್ಠರಿಗೆ-ಸಂತರಿಗೆ ಭಾರತ ಒಂದು ನಿದರ್ಶನವಾಗಿದೆ. ಧ್ಯಾನಕ್ಕೆ ಹೆಚ್ಚು ಒತ್ತು ನೀಡಿದಲ್ಲಿ ನಮ್ಮಲ್ಲಿ ಧನಾತ್ಮಕ ಚಿಂತನೆಗಳು ಹೆಚ್ಚಾಗಿ ಮನಸ್ಸಿಗೆ ನೆಮ್ಮದಿ ಶಾಂತಿ ದೊರಕುತ್ತದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕುಮಾರಸ್ವಾಮಿ ಕೆ ನಿರೂಪಿಸಿದರು.