ಚಳ್ಳಕೆರೆ ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಹಮ್ಮಿಕೊಂಡ ಶ್ರೀ ಸಂತ ಕನಕ ದಾಸರ ಜಯಂತಿ ಅಂಗವಾಗಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಭಾವ ಚಿತ್ರಕ್ಕೆ ಪುಷ್ಪಮಾಲೆ ಹಾಕಿ ಜಯಂತಿಗೆ ಶುಭಾ ಕೋರಿದರು. ಇದೇ ಸಂಧರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ಹಾಗೂ ಇತರ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಇನ್ನೂ ಅದೇ ರೀತಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಶಾಸಕರ ಭವನದಲ್ಲಿ ಆಯೋಜಿಸಿದ್ದ ಜಯಂತಿಯಲ್ಲಿ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ರಮೇಶ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಧರ , ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಪ್ರಸನ್ನಕುಮಾರ್, ಮುಖಂಡರುಗಳಾದ ಸೈಯದ್, ಸಿರಿಯಪ್ಪ, ತಿಪ್ಪೇಸ್ವಾಮಿ, ಅನ್ವರ್ ಮಾಸ್ಟರ್ , ಸಿ.ಟಿ.ಶ್ರೀನಿವಾಸ್, ರುದ್ರಮುನಿ, ಗಿರಿಯಪ್ಪ, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಗೂ ಸಮುದಾಯದವರು ಉಪಸ್ಥಿತರಿದ್ದರು.