ಚಳ್ಳಕೆರೆ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಶಿಕ್ಷಣ), ರಾಷ್ಟ್ರೀಯ ಸೇವಾ ಯೋಜನಾ
ಘಟಕಗಳಿಗೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ಎನ್ ಎಸ್ ಎಸ್ ಘಟಕಾಧಿಕಾರಿ ಶಾಂತಕುಮಾರಿ ನೇಮಕ.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ),
ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಎನ್.ಎಸ್.ಎಸ್. ಅಧಿಕಾರಿಗಳ ಸೂಚನೆ ಮೇರೆಗೆ ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಸಂಪೂರ್ಣ ಅನುಷ್ಠಾನಕ್ಕಾಗಿ ಎನ್.ಎಸ್.ಎಸ್. ಬಗ್ಗೆ
ಆಸಕ್ತಿ ಹೊಂದಿರುವ ಕಾರ್ಯಕ್ರಮಾಧಿಕಾರಿಗಳನ್ನು ಗುರುತಿಸಿ ಜಿಲ್ಲೆಗೆ ಒಬ್ಬರಂತೆ ಅವಶ್ಯವಿರುವ ಒಟ್ಟು 32 ಮಂದಿ ನೋಡಲ್ ಅಧಿಕಾರಿಗಳನ್ನು 2 ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.

ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಆಯೋಜಿಸಲ್ಪಡುವ ಎನ್.ಎಸ್.ಎಸ್ ಕಾರ್ಯಕ್ರಮಗಳು, ಶಿಬಿರಗಳು ಮತ್ತಿತರ ಎನ್.ಎಸ್.ಎಸ್. ಕುರಿತ ಮಾಹಿತಿಗಳನ್ನು ತಪ್ಪದೇ ಕಾಲಕಾಲಕ್ಕೆ ಕೇಂದ್ರ ಕಛೇರಿಗೆ ಸಲ್ಲಿಸತಕ್ಕದ್ದು.

ಮುಂದುವರಿದು, ನೇಮಕಗೊಂಡಿರುವ ನೋಡಲ್ ಅಧಿಕಾರಿಗಳಿಗೆ ಎನ್.ಎಸ್.ಎಸ್./ಇಲಾಖೆ/ಸರ್ಕಾರದ ವತಿಯಿಂದ ಯಾವುದೇ ರೀತಿಯ ಭತ್ಯೆ, ರಜೆ ಇತ್ಯಾದಿಗಳನ್ನು ನೀಡಲಾಗುವುದಿಲ್ಲ ಎಂಬ ಷರತ್ತಿನೊಂದಿಗೆ ‌ಸಂಯೋಜನಾಧಿಕಾರಿಗಳು ರಾಷ್ಟ್ರೀಯ ಸೇವಾ ಯೋಜನಾ ಶಾಖೆ,ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ),
ಬೆಂಗಳೂರು,ನೇಮಕಮಾಡಿ ಆದೇಶ ಹೊರಡಿಸಿದ್ದಾರೆ.

About The Author

Namma Challakere Local News
error: Content is protected !!