ಚಳ್ಳಕೆರೆ :
ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಇದೇ ಡಿಸೆಂಬರ್ 22ರಂದು ಚಳ್ಳಕೆರೆ ಪಟ್ಟಣದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾಮಟ್ಟದ ಜನತಾ ದರ್ಶನ ಏರ್ಪಡಿಸಲಾಗುತ್ತಿದ್ದು,
ಈ ಬಾರಿಯ ಜಿಲ್ಲಾಮಟ್ಟದ ಜನತಾ ದರ್ಶನ ಇದೇ ಡಿಸೆಂಬರ್ 22ರಂದು ಬೆಳಿಗ್ಗೆ 10ಕ್ಕೆ ಚಳ್ಳಕೆರೆ ಪಟ್ಟಣದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.ಸ್ಥಳೀಯ ಶಾಸಕ ಟಿ.ರಘುಮೂರ್ತಿ ಒಳಗೊಂಡಂತೆ
ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್ಗಳ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.