ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಮಹಮ್ಮದ್ ಕೆ ಎಂ ಎಫ್
ನಾಯಕನಹಟ್ಟಿ :: ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ ಎಂದು ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಮಹಮ್ಮದ್ ಕೆ. ಎಂ.ಎಫ್. ಹೇಳಿದ್ದಾರೆ.
ಮಂಗಳವಾರ ಪಟ್ಟಣದಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಾಯಕನಹಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರ ನಲಗೇತನಹಟ್ಟಿ, ಬಾಲಾಜಿ ರಕ್ತ ನಿಧಿ ಕೇಂದ್ರದ ,ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯ ಕಾಪಾಡುವುದಕ್ಕೆ ತುರ್ತು ಸಂದರ್ಭದಲ್ಲಿ ರಕ್ತ ಅವಶ್ಯಕತೆ ಇದೆ ಅದು ಕೃತಕ ಉತ್ಪಾದನೆ ಸಾಧ್ಯವಿಲ್ಲದ ಕಾರಣಕ್ಕೆ ರಕ್ತ ದಾನಿಗಳಿಂದಲೇ ಸಂಗ್ರಹಿಸಬೇಕು ಇದಕ್ಕಾಗಿ ಪ್ರತಿಯೊಬ್ಬ ಆರೋಗ್ಯವಂತ ಪುರುಷ ಮಹಿಳೆಯರು ರಕ್ತದಾನ ಮಾಡುವುದಕ್ಕೆ ಮಂಚೂಣಿಯಲ್ಲಿ ಇರಬೇಕು
ರಕ್ತದಾನ ನೂರಾರು ಜನರ ಜೀವ ಉಳಿಸಲು ರಕ್ತದಾನ ಶ್ರೇಷ್ಠವಾದ ದಾನ ಎಂದರು.
ಇದು ವೇಳೆ ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಿಕಿ ಕೆ. ಸುಧಾ ಮಾತನಾಡಿ ರಕ್ತದಾನದಿಂದ ರಕ್ತದೊತ್ತಡ ಮಧುಮೇಹ ದಂತಹ ರೋಗಗಳು ನಿಯಂತ್ರಣಕ್ಕೆ ಬರುವುದರ ಜೊತೆಗೆ ಆತ್ಮತೃಪ್ತಿ ಸಿಗುತ್ತದೆ ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ರೋಗದ ಮೇಲೆ ಸಕರಾತ್ಮಕ ಪರಿಣಾಮ ಬೀರುತ್ತದೆ ದೇಶದಲ್ಲಿ ಪ್ರತಿ ವರ್ಷ 41 ದಶಲಕ್ಷ ಯೂನಿಟ್ ರಕ್ತದ ಕೊರತೆ ಎದುರಾಗುತ್ತದೆ ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು
ಇದೇ ಸಂದರ್ಭದಲ್ಲಿ ವೈದ್ಯರಾದ ಮೊಹಮ್ಮದ್, ಡಾ.ಅನಿತಾ ,ಪಂಕಜ, ನಾಗರಾಜ್, ಅಶೋಕ್, ಮಲ್ಲಿಕಾರ್ಜುನಪ್ಪ, ಆಪ್ತ ಸಮಾಲೋಚಿಕಿ ಕೆ. ಸುಧಾ, ದಂತ ವೈದ್ಯ ಡಾ. ಓಬಣ್ಣ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶೇಷಾದ್ರಿ ನಾಯಕ್, ಸುಕನ್ಯಾ, ಶಾಂತಮ್ಮ, ಆಶಾ ಕಾರ್ಯಕರ್ತೆರಾದ ಪಾರಿಜಾತ, ದ್ರಾಕ್ಷಾಯಿಣಿ, ಆಶಾ, ಮಂಗಳಮ್ಮ, ಬಾಲಾಜಿ ರಕ್ತ ನಿಧಿ ಕೇಂದ್ರ ಹಾಗೂ ಎಲ್ಲಾ ಸಿಬ್ಬಂದಿಗಳು ಇದ್ದರು