ಚಳ್ಳಕೆರೆ : ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಇದೇ ತಿಂಗಳ ಡಿಸೆಂಬರ್ 27ಕ್ಕೆ ಚಳ್ಳಕೆರೆ ನಗರದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.
ಅಂದಿನ ಕಾರ್ಯಕ್ರಮಕ್ಕೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ನಡೆಯಲಿದೆ, ಸ್ಥಳೀಯ ಶಾಸಕರಾದ ಟಿ.ರಘುಮೂರ್ತಿ ಹಾಗೂ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ಕೌಂಟರ್‌ಗಳ ವ್ಯವಸ್ಥೆ ಕಲ್ಪಿಸಿರುತ್ತದೆ.
ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾಮಟ್ಟದ ಜನತಾ ದರ್ಶನ ಏರ್ಪಡಿಸಲಾಗಿದೆ ಎನ್ನಲಾಗಿದೆ.