ಚಳ್ಳಕೆರೆ : ಸಂವಿಧಾನ ಜಾಗೃತಿ ರಥ ತಾಲೂಕಿನ ಪ್ರತಿ ಗ್ರಾಮದಲ್ಲಿ ಸಂಚರಿಸಲಿದೆ ಆದ್ದರಿಂದ ಸ್ಥಳೀಯವಾಗಿ ಎಲ್ಲಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ಸಾರ್ವಜನಿಕರು ಸಹಕರಿಸಿ ಸಂವಿಧಾನದ ಮಹತ್ವದ ಆಶಯ ಈಡೇರಿಸ ಬೇಕು ಎಂದು ತಾಪಂ.ಆಡಳಿತ ಅಧಿಕಾರಿ, ಕೃಷಿ ಜಂಟಿ ನಿರ್ದೇಶಕರಾದ ಮಂಜುನಾಥ್ ಹೇಳಿದರು.
ಅವರು ನಗರದ ತಾಲೂಕು ಪಂಚಾಯತ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಟ್ಟಿಗೆ ಪೂರ್ವ ಭಾವಿ ಸಭೆ ನಡೆಸಿ ಮಾತನಾಡಿದರು.
ಇದೇ ಸಂಧರ್ಭದಲ್ಲಿ ತಹಶಿಲ್ದಾರ್ ರೇಹಾನ್ ಪಾಷ,
ತಾಪಂ. ಇಓ ಶಶಿಧರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್, ಪೌರಾಯುಕ್ತ ಸಿ.ಚಂದ್ರಪ್ಪ, ಹಾಗೂ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.