ಚಳ್ಳಕೆರೆ: ಸಂವಿಧಾನ ಜಾಗೃತಿ ಜಾಥಾದ ಸ್ಥಬ್ದ ಚಿತ್ರ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಗ್ರಾಮಕ್ಕೆ ಆಗಮಿಸಿದ ತರುವಾಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾದ ಸ್ಥಬ್ದ ಚಿತ್ರ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಕ್ಕಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಾದ ಮಂಜುನಾಥ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರುಗಳು ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.