ನಾಯಕನಹಟ್ಟಿ ::
ನುಡಿದಂತೆ ನಡೆದಿದ್ದೇವೆ ಐದು ಗ್ಯಾರಂಟಿಗಳ ಸಮರ್ಪಕ ಅನುಷ್ಠಾನ ಮಾಡಿದ್ದೇವೆ ಗ್ರಾಮೀಣ ಪ್ರದೇಶದ ಎಷ್ಟೋ ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಎಂದು ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ. ಹೇಳಿದ್ದಾರೆ.
ಶುಕ್ರವಾರ ಪಟ್ಟಣದ ಒಳಮಠದ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಹಯೋಗದಲ್ಲಿ.
ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಐದು ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ್ದಾರೆ
ಸರ್ಕಾರ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳಿಂದ ಎಷ್ಟೋ ಬಡ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನಾವು ಜನರಿಗೆ ತಲುಪಿಸಿದ್ದೇವೆ ನುಡಿದಂತೆ ನಡೆದಿದ್ದೇವೆ. ಈ ಭಾಗದ 8 ಗ್ರಾ.ಪಂ. ಒಂದು ಪಟ್ಟಣ ಪಂಚಾಯತಿ ಎಲ್ಲಾ ಫಲಾನುಭವಿಗಳು ಸೇರಿರೋದು ಸಂತೋಷ ತಂದಿದೆ ಎಂದರು. ನಿಮ್ಮೆಲ್ಲಾ ಅಭಿಮಾನ ಪ್ರೀತಿ ನಮ್ಮ ಸರ್ಕಾರದ ಮೇಲೆ ಹೀಗೆ ಇರಲಿ ಎಂದು ತಿಳಿಸಿದರು..
ಇದೆ ವೇಳೆ ತಾಹಸಿಲ್ದಾರ್ ರೇಹಾನ್ ಪಾಷಾ ಮಾತನಾಡಿ
ಗ್ರಾಮೀಣ ಪ್ರದೇಶದ ಬಡ ಮಹಿಳೆಯರಿಗೆ ಗೃಹಲಕ್ಷ್ಮಿ
ಯೋಜನೆಯಿಂದ ತುಂಬಾ ಮಹಿಳೆಯರಿಗೆ ಅನುಕೂಲವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಪ್ರಸ್ತಾವಿಕವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಸಂಕ್ಷಿಪ್ತವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಸೈಯದ್ ಅನ್ವರ್, ಸಿಡಿಪಿಓ ಹರಿಪ್ರಸಾದ್, ನಾಡಕಚೇರಿ ಉಪತಾಹಸಿಲ್ದಾರ್ ಬಿ ಶಕುಂತಲಾ ರಾಜಸ್ವ ನಿರೀಕ್ಷಕ ಚೇತನ್ ಕುಮಾರ್, ಗ್ರಾಮ ಲೆಕ್ಕಾಧಿಕಾರಿಗಳಾದ ಹರೀಶ್, ಶಂಕರ್, ಜಗದೀಶ್, ಶರಣಬಸಪ್ಪ ,ರವಿ, ತಳಕು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎನ್ ಜೆ ಮಮತಾ, ಶಾಖಾಧಿಕಾರಿ ಎನ್ ಬಿ ಬೋರಣ್ಣ, ಪಿಎಸ್ಐ ಲೋಕೇಶ್ ಅಂಗನವಾಡಿ ಶಿಕ್ಷಕಿಯರು ಮತ್ತು ಹೋಬಳಿಯ ವಿವಿಧ ಹಳ್ಳಿಗಳ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಇದ್ದರು