ಚಳ್ಳಕೆರೆ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ನ್ನು ಸ್ಥಳಿಯರಿಗೆ ನೀಡಬೇಕು ಆಗ ಮಾತ್ರ ಕ್ಷೇತ್ರ ಅಭಿವೃದ್ದಿಯಾಗುವುದಲ್ಲದೆ ಸ್ಥಳೀಯರು ಸಮಸ್ಯೆಗಳನ್ನು ಹೇಳಿಕೊಳ್ಳಲು ಅನುಕೂಲವಾಗುತ್ತದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಸಿಟಿ ಕೃಷ್ಣಮೂರ್ತಿ ಹೇಳಿದ್ದಾರೆ.
ಅವರು ನಗರದ ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಹಾಗೂ ಜಗಲೂರಿನ ಇಮಾಮ್ ಸಾಬ್ ಹೊರತು ಪಡಿಸಿ ಸ್ಥಳೀಯರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಿಲ್ಲ,
ಆದ್ದರಿಂದ ಈ ಬಾರಿ ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.