ಚಳ್ಳಕೆರೆ ಫೆ 8. ಸಂವಿಧಾನ ಪೀಠಿಕೆ, ಜವಾಬ್ದಾರಿ ಮತ್ತು ಅದರ ಮಹತ್ವ ಸಾರುವ ಅಂಬೇಡ್ಕರ್ ಪ್ರತಿಮೆಯ ಸ್ತಬ್ಧ ಚಿತ್ರವನ್ನೊಳಗೊಂಡ ಸಂವಿಧಾನ ಜಾಗೃತಿ ಜಾಥಾ ರಥವು ಗೋಪನಹಳ್ಳಿ ಗ್ರಾಪಂ ಅಧ್ಯಕ್ಷರು, ಸದಸ್ಯರು,ಮುಖಂಡರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಕುಂಭಮೇಳದೊಂದಿಗೆ ಅದ್ದೂರಿಯಾಗಿ ಬರಮಾಡಿಕೊಂಡರು.
ಗ್ರಾಪಂ ಅಧ್ಯಕ್ಷೆ ರಾಧಮ್ಮ ಸದಸ್ಯರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚಣೆ ಗೈದರು. ಪಂಚಾಯತ್ ಸದಸ್ಯರು ,ಸಿಬ್ಬಂದಿ, ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಸಂವಿಧಾನ ಪೀಠಿಕೆಯ ಮಹತ್ವವನ್ನು ಸಾರುವ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಸಮಾಜಕಲ್ಯಾಣ ಇಲಾಖೆಯ ಸಹಾಯಕನಿರ್ಧೀಶಕ ಮಂಜಪ್ಪ ಮಾತನಾಡಿ ಭಾರತದ ಸಂವಿಧಾನ ಅತೀ ದೊಡ್ಡ ಹಾಗೂ ಲಿಖಿತ ಸಂವಿಧಾನವಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನದ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯ ಈ ರಥದ ಮೂಲಕ ನಡೆಯುತ್ತಿದ್ದೆ, ಇಂದಿನ ವಿದ್ಯಾರ್ಥಿಗಳಿಗೆ ನವ ರಾಷ್ಟ್ರವನ್ನು ನಿರ್ಮಾಣ ಮಾಡಲು ಈ ರಥವು ಸಹಕಾರಿಯಾಗಲಿದೆ ಎಂದರು.ಸಮಾಜದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಇರುವ ಹಕ್ಕು, ಸಂವಿಧಾನದಲ್ಲಿ ಉಲ್ಲೇಖಿತ ಜವಾಬ್ದಾರಿಗಳ ವಿವರಿಸಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಿದರು.
ಸಂಣವಿಧಾನ ಜಾಗೃತಿ ರಥ ಜಾಥ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಉಪಾಧ್ಯಕ್ಷೆ ಸದಸ್ಯರು, ಮುಖಂಡರು, ಪಿಡಿಒ ಯೋಗೇಶ್ ಸಂಜೀವಿನಿ ಒಕ್ಕೂಟದ ಮಹಿಳೆಯರು,ಆಶಾ ಕಾರ್ಯಕರ್ತೆಯರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು