ಚಳ್ಳಕೆರೆ ನ್ಯೂಸ್ : ರಾಜ್ಯ ಸರಕಾರ ವಿಶ್ವ ಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ ಬೆನ್ನಲೆಯಲ್ಲಿ ಈಡೀ ರಾಜ್ಯದಲ್ಲಿ ಎಲ್ಲಾ ಸರಕಾರಿ ಕಛೇರಿಗಳಲ್ಲಿ ವಿಶ್ವ ಗುರು ಬಸವಣ್ಣನವರ ಭಾವ ಚಿತ್ರವನ್ನು ಇಂದು ಅಳವಡಿಸಲಾಗಿದೆ.
ಅದರಂತೆ ಇಂದು ಚಳ್ಳಕೆರೆ ತಾಲೂಕಿನ ಸುಮಾರು 32 ಇಲಾಖೆಗಳಲ್ಲಿ ತಹಶಿಲ್ದಾರ್ ರೇಹಾನ್ ಪಾಷ ಹಾಗು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ನೇತೃತ್ವದಲ್ಲಿ ಎಲ್ಲರ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಕಛೇರಿಗಳಲ್ಲಿ ವಿಶ್ವ ಗುರು ಬಸವಣ್ಣನವರ ಭಾವಚಿತ್ರವನ್ನು ಇಟ್ಟು ಪೂಜೆ ಸಲ್ಲಿಸಿ ಬಸವಣ್ಣನವರ ಬಗ್ಗೆ ಮಾತನಾಡಿದರು.