ಚಳ್ಳಕೆರೆ ನ್ಯೂಸ್ : 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರ ಸೂಚನೆಯಂತೆ ತಮ್ಮ ಪಕ್ಷದ ಕಾರ್ಯಕರ್ತರ
ಸಭೆಯನ್ನು ಇದೇ ಶನಿವಾರ ಫೆ.24 ರ ಬೆಳಗ್ಗೆ 10.30 ನಗರದ
ಬೆಂಗಳೂರು ರಸ್ತೆಯ ದಲ್ಲಾಲರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ಹೇಳಿದರು.
ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಚಳ್ಳಕೆರೆ ತಾಲೂಕಿನ
ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಕಾರ್ಯಕರ್ತರು ಹಾಗೂ
ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು
ನೀಡುವ ಮೂಲಕ ಸಭೆಯನ್ನು ಯಶಸ್ವಿಗೊಳಿಸುವಂತೆ ತಾಲೂಕು
ಜೆಡಿಎಸ್ ಪಕ್ಷದ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ(ಪಿ.ಟಿ)ತಿಳಿಸಿದ್ದಾರೆ.
ಸಭೆಯಲ್ಲಿ
ಮುಖ್ಯ ಅತಿಥಿಗಳಾಗಿ
ಜೆ ಡಿ ಎಸ್ ಜಿಲ್ಲಾಧ್ಯಕ್ಷ ಜಯಣ್ಣ ಮಾಜಿ ಶಾಸಕ ತಿಮ್ಮರಾಯಪ್ಪ ರಾಜ್ಯ
ಪರಿಷತ್ ಸದಸ್ಯಯಶೋದರ, ರಾಜ್ಯ ಪ್ರಧಾನ ಕಾರ್ಯದರ್ಶಿ
ಕಾಂತರಾಜ್,ಚಳ್ಳಕೆರೆ ಜೆಡಿಎಸ್ ಪರಾಜಿತ ಅಭ್ಯರ್ಥಿ ಎಂ.ರವೀಶ್
ಕುಮಾರ್, ಹಿರಿಯೂರು ಪರಾಜಿತ ಅಭ್ಯರ್ಥಿ ರವೀಂದ್ರಪ್ಪ ಚಳ್ಳಕೆರೆ
ಜೆಡಿಎಸ್ ಕಾರ್ಯಧ್ಯಕ್ಷ ಹೆಗ್ಗೆರೆ ಆನಂದಪ್ಪ ಇತರರು ಭಾಗವಹಿಸಲಿದ್ದಾರೆ.