ಚಳ್ಳಕೆರೆ: ದೇಶದಲ್ಲಿ ಪೋಲಿಯೋ ಮುಕ್ತ ಆಗಿದ್ದರಿಂದ ಕಳೆದ ವರ್ಷ ಅಭಿಯಾನ ಆಯೋಜಿಸಿರಲಿಲ್ಲ ಆದರೆ ಅಕ್ಕಪಕ್ಕದ ರಾಷ್ಟ್ರಗಳಲ್ಲಿ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮರು ಚಾಲನೆ ನೀಡಿದೆ ಎಂದು ತಹಶೀಲ್ದಾರ್ ರೆಹಾನ್ ಪಾಷಾ ತಿಳಿಸಿದರು.
ನಗರದ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಜವಾಬ್ದಾರಿತವಾಗಿ ಕಾರ್ಯ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದರು. ತಾಲೂಕಿನಲ್ಲಿ ಮಾರ್ಚ್ 3 ರಿಂದ 6ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಇದರ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ ಎಂದರು.

ಆರೋಗ್ಯ ಅಧಿಕಾರಿ ಡಾ.ಕಾಶಿ ಮಾತನಾಡಿ ಹುಟ್ಟಿನಿಂದ ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು 233 ಬೂತ್ ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಆರೋಗ್ಯ ಸಹಾಯಕ ಅಧಿಕಾರಿ ಕುಂದಾಪುರ ತಿಪ್ಪೇಸ್ವಾಮಿ ಮಾತನಾಡಿ, ಮಾರ್ಚ್ 3ರಂದು ಶೇಕಡ 95 ರಷ್ಟು ಗುರಿ ಸಾಧಿಸುವ ಉದ್ದೇಶ ಹೊಂದಿದ್ದು ತಾಲೂಕಿನಲ್ಲಿ ಒಟ್ಟು 28,826 ಮಕ್ಕಳನ್ನು ಗುರುತಿಸಲಾಗಿದ್ದು ಶೇಕಡ ನೂರರಷ್ಟು ಪ್ರಗತಿ ಸಾಧಿಸಲು ಶ್ರಮಿಸಲಾಗುವುದು ಮಾರ್ಚ್ 4 ಮತ್ತು 5 ರಂದು ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಹನಿ ಹಾಕಲಾಗುವುದು ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ವಾಹನಗಳನ್ನು ಬಳಸಲು ಮನವಿ ಮಾಡಿದ್ದು ಎಲ್ಲ ಇಲಾಖೆ ಅಧಿಕಾರಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.

ಖಾಸಗಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ರೈಲ್ವೆ ನಿಲ್ದಾಣ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಒಟ್ಟು 470 ಸಿಬ್ಬಂದಿಗಳನ್ನು ನೇಮಿಸಲಿದ್ದು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ಪಲ್ಸ್ ಪೋಲಿಯೋ ಬಗ್ಗೆ ಮಾಹಿತಿ ಮತ್ತು ತರಬೇತಿಯನ್ನು ನೀಡಲಾಗಿದೆ. 51 ಮೇಲ್ವಿಚಾರಕರನ್ನು ನೇಮಿಸಲಾಗಿದೆ ತಾಲೂಕಿನಲ್ಲಿ ಗುರುತಿಸಲಾಗಿರುವ ಎಲ್ಲಾ ಮಕ್ಕಳಿಗೆ ಹಾಗೂ ಬೇರೆ ಊರುಗಳಿಂದ ಬಂದ ಮಕ್ಕಳಿಗೂ ಸಹ ಪಲ್ಸ್ ಪೋಲಿಯೋ ಲಸಿಕೆ ಹಾಕಿ ಯಶಸ್ವಿಯಾಗಿ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿಡಿಪಿಓ ಹರಿಪ್ರಸಾದ್, ಬೆಸ್ಕಾಂ ಇಲಾಖೆ ಸಹಾಯಕ ಅಧಿಕಾರಿ ರಾಜು, ಡಾಕ್ಟರ್ ಗೀತಾ ಮಂಜುನಾಥ್ ಪ್ರದೀಪ್, ಶರೀಫ್, ನಗರಸಭೆ ಆಹಾರ ನೀರಿಕ್ಷಕರಾದ ಗಣೇಶ್, ಸುನೀಲ್ ಇತರರು ಇದ್ದರು.

About The Author

Namma Challakere Local News
error: Content is protected !!