ಚಳ್ಳಕೆರೆ ನ್ಯೂಸ್ : ಸರಕಾರಿ ಶಾಲೆಯಲ್ಲಿ ನಿರ್ಮಾಣ ಹಂತದ ಶೌಚಾಲಯ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಪಿ.ಮಂಜುನಾಥ್ ಆರೋಪ ಮಾಡಿದ್ದಾರೆ.
ಅವರು ನಗರದ 27 ವಾರ್ಡ್ ನಲ್ಲಿ ಇರುವ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಿರ್ಮಾಣ ವಾಗುವ ಶೌಚಾಲಯ ಲ್ಯಾಂಡ್ ಆರ್ಮಿ ಅಧಿಕಾರಿಗಳು ನಿರ್ವಹಣೆ ಮಾಡುತ್ತಾರೆ ಆದರೆ ಶೌಚಾಲಯ ಕಾಮಗಾರಿ ಕಳೆಪೆಯಿಂದ ಕೂಡಿದ್ದು ಈ ಕೂಡಲೆ ಸರಿಪಡಿಸಬೇಕು ಗುಣಮಟ್ಟದ ಕಾಮಗಾರಿ ಮಾಡಬೇಕು ಇಲ್ಲವಾದರೆ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುತ್ತದೆ ಸಂಘಟನೆಯು ಎಚ್ಚರಿಕೆ ನೀಡಿದೆ.