.

ನಾಯಕನಹಟ್ಟಿ:: ಪ್ರತಿಯೊಬ್ಬ ವ್ಯಕ್ತಿಯೂ ಅವರ ಕುಟುಂಬದ ಆಧಾರದ ಸ್ತಂಭವಾಗಿರುತ್ತಾರೆ ತಮ್ಮ ಮನೆಯಿಂದ ಹೊರಡುವಾಗಲೇ ಹೆಲ್ಮೆಟ್ ಧರಿಸಿಕೊಂಡು ಸಂಚಾರ ಮಾಡುವುದು ಕಡ್ಡಾಯವಾಗಿದೆ ಎಂದು ಪಿಎಸ್ಐ 2 ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶುಕ್ರವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜೆಜೆಆರ್ ಶಾಲೆಯ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮ ಹಾಗೂ ವಿದ್ಯಾರ್ಥಿಗಳಿಗೆ ಹೆಲ್ಮೆಟ್ ಬಗ್ಗೆ ಜಾಗೃತಿ ಪಾಠ ಹೇಳಿಕೊಡುವುದರ ಮುಖಾಂತರ ಮಾತನಾಡಿದ ಅವರು ದ್ವಿಚಕ್ರ ವಾಹನ ಸವಾರರಿಗೆ ದಂಡ ವಿಧಿಸುವುದು ನಮ್ಮ ಕೆಲಸವಲ್ಲ ಇತ್ತೀಚಿನ ದಿನಗಳಲ್ಲಿ ಅಪಘಾತದ ಅಂಕಿ ಸಂಖ್ಯೆಗಳ ಪ್ರಕಾರ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಜೀವ ಕಳೆದುಕೊಂಡಿರುವ ಸಂಖ್ಯೆ ಹೆಚ್ಚಾಗಿದೆ.
ಅವರ ಕುಟುಂಬಗಳು ಇಂದು ಪಡಬಾರದ ಕಷ್ಟಪಡುತ್ತಿದ್ದಾರೆ ಆದ್ದರಿಂದ ಜೀವದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವವಾಗಿರುತ್ತದೆ ಹೋಬಳಿಯ ಎಲ್ಲಾ ಸಾರ್ವಜನಿಕರು ದಯವಿಟ್ಟು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಎಂದು ಪೋಷಕರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಲು ಜೆಜೆಆರ್ ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು ಎಂದರು.

ಇದೇ ಸಂದರ್ಭದಲ್ಲಿ ಎಎಸ್ಐ ತಿಪ್ಪೇಸ್ವಾಮಿ ಜೆಜೆಆರ್ ಶಾಲೆಯ ಶಿಕ್ಷಕ ಪಿ ಟಿ ಜಯಣ್ಣ, ಡಿ ಎಂ ಪಾಲಯ್ಯ, ಶಿಕ್ಷಕಿ ನಫೀಸತಾಜ್, ಪೇದೆ ಶಿವಣ್ಣ, ಮಹಿಳಾ ಪೋಲಿಸ್ ಪೇದೆಗಳಾದ ಮಂಜಮ್ಮ, ಭಾಗ್ಯಮ್ಮ, ವಿದ್ಯಾರ್ಥಿ- ವಿದ್ಯಾರ್ಥಿನಿಯರು ಇದ್ದರು

Namma Challakere Local News
error: Content is protected !!