ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಕಾಪರಹಳ್ಳಿ ಗ್ರಾಮದಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ವಿಶೇಷ ಅನುದಾನದಡಿ ಸುಮಾರು 2.00ಕೋಟಿ ರೂ.ಗಳ ಅನುದಾನದಲ್ಲಿ ಮಂಜೂರಾದ ಕಾಪರಹಳ್ಳಿ ಯಿಂದ ಜಡೇಕುಂಟೆ ವರೆಗೆ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ವಿಜಯಭಾಸ್ಕರ್ ರವರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗರಾಜ್, ಉಪಾಧ್ಯಕ್ಷರು, ಸದಸ್ಯರುಗಳು, ಮುಖಂಡರುಗಳಾದ ನಾಗರಾಜ್, ಮಹಾಲಿಂಗಪ್ಪ, ಲಕ್ಷ್ಮಣ, ತಿಪ್ಪೇಸ್ವಾಮಿ, ಪ್ರಸನ್ನ ಕುಮಾರ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.