ಚಳ್ಳಕೆರೆ: ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ಆರೋಗ್ಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ ರಘುಮೂರ್ತಿ ಹೇಳಿದರು.
ಅವರು ಚಳ್ಳಕೆರೆ ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹುಟ್ಟಿದ
ಒಂದುವರೆ ತಿಂಗಳಿಂದ ಐದು ವರ್ಷದ ಮಗುವಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು, ಇದಕ್ಕೆ ಪೋಷಕರು ಸಹಕರಿಸಬೇಕು, ಜೊತೆಗೆ ಆರೋಗ್ಯ ಅಧಿಕಾರಿಗಳು ಕೂಡ ನಗರದಲ್ಲಿ ಹಲವೆಡೆ ವ್ಯಾಕ್ಸಿನೇಷನ್ ಕಿಟ್ ಮೂಲಕ ಪ್ರತಿ ವಾರ್ಡ್ ಗಳಲ್ಲಿ ಪೊಲೀಯೋ ಲಿಸಿಕೆ ಹಾಕಿಸಬೇಕು ಎಂದರು.
ಆರೋಗ್ಯ ಅಧಿಕಾರಿ ಡಾ.ಕಾಶಿ ಮಾತನಾಡಿ ಹುಟ್ಟಿನಿಂದ ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು 233 ಬೂತ್ ಗಳನ್ನು , ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಆರೋಗ್ಯ ಸಹಾಯಕ ಅಧಿಕಾರಿ ಕುಂದಾಪುರ ತಿಪ್ಪೇಸ್ವಾಮಿ ಮಾತನಾಡಿ, ಮಾರ್ಚ್ 3ರಿಂದ ಚಾಲನೆ ನೀಡಲಾಗಿದೆ ತಾಲೂಕಿನಲ್ಲಿ ಒಟ್ಟು 28,826 ಮಕ್ಕಳನ್ನು ಗುರುತಿಸಲಾಗಿದ್ದು ಶೇಕಡ ನೂರರಷ್ಟು ಪ್ರಗತಿ ಸಾಧಿಸಲು ಶ್ರಮಿಸಲಾಗುವುದು ,
ಖಾಸಗಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ರೈಲ್ವೆ ನಿಲ್ದಾಣ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಒಟ್ಟು 470 ಸಿಬ್ಬಂದಿಗಳನ್ನು ನೇಮಿಸಲಿದ್ದು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ಪಲ್ಸ್ ಪೋಲಿಯೋ ಬಗ್ಗೆ ಮಾಹಿತಿ ಮತ್ತು ತರಬೇತಿಯನ್ನು ನೀಡಲಾಗಿದೆ. 51 ಮೇಲ್ವಿಚಾರಕರನ್ನು ನೇಮಿಸಲಾಗಿದೆ ತಾಲೂಕಿನಲ್ಲಿ ಗುರುತಿಸಲಾಗಿರುವ ಎಲ್ಲಾ ಮಕ್ಕಳಿಗೆ ಹಾಗೂ ಬೇರೆ ಊರುಗಳಿಂದ ಬಂದ ಮಕ್ಕಳಿಗೂ ಸಹ ಪಲ್ಸ್ ಪೋಲಿಯೋ ಲಸಿಕೆ ಹಾಕಿ ಯಶಸ್ವಿಯಾಗಿ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಗಳಾದ ವೆಂಕಟೇಶ್, ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿಗಳಾದ ರಾಮಪ್ಪ, ನಗರಸಭೆ ಸದಸ್ಯರಾದ ಸುಜಾತ ಪ್ರಹ್ಲಾದ್, ಜೈ ತುಂಬಿ ಮಾಲೀಕ ಸಾಬ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಮುಖಂಡರುಗಳಾದ ಕೃಷ್ಣಮೂರ್ತಿ, ರುದ್ರಮುನಿ, ಪ್ರಹ್ಲಾದ್, ಖಾದರ್, ಚೇತನ್ ಕುಮಾರ್ , ಅಂಜಿನಪ್ಪ, ನಗರಸಭೆ ಪ್ರಬಾರಿ ಪೌರಾಯುಕ್ತ ವಿನಯ್ ಕುಮಾರ್, ಸಿಡಿಪಿಓ ಹರಿಪ್ರಸಾದ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.