ಚಳ್ಳಕೆರೆ: ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಶ್ರೀ ಚಳ್ಳಕೆರಮ್ಮ ದೇವಿಯ ಜಾತ್ರೆ ಇದೆ ಮಾರ್ಚ 11 ರಿಂದ ಆರಂಭಗೊಳ್ಳಿದ್ದು ಜಾತ್ರೆಯ ಪೂರ್ವ ಸಿದ್ದತೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಈ ಬಾರಿ ಜಾತ್ರೆಗೆ ಅವಘಡಗಳು ನಡೆಯದಂತೆ ಮುಂಜಾಗ್ರತಾ ವಹಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ಶ್ರೀ ಚಳ್ಳಕೆರಮ್ಮ ದೇವಿಯ ದರ್ಶನ ಪಡೆದು ಶಾಸಕರು ದೇವಸ್ಥಾನದ ಆವರಣದಲ್ಲಿ ಜಾತ್ರೆಯ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಹಲವು ಸೂಚನೆಗಳನ್ನು ನೀಡಿದರು.
ಈ ವೇಳೆ ಮಾತನಾಡಿದ ಅವರು ನಗರದ ಆರಾಧ್ಯ ದೇವತೆ ಶ್ರೀ ಚಳ್ಳಕೆರಮ್ಮ ದೇವಿಗೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ ರಘುಮೂರ್ತಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಚಳ್ಳಕೆರಮ್ಮ ದೇವಿಯು ನಗರದ ಆರಾಧ್ಯ ದೈವವಾಗಿದ್ದು ಜಾತ್ರೆಗೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ನೆರಳಿನ ವ್ಯವಸ್ಥೆ ಜಾತ್ರೆ ವೀಕ್ಷಿಸಲು ಆಸನಗಳ ವ್ಯವಸ್ಥೆ ಸಂಚಾರ ನಿಯಂತ್ರಣ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಹಾಗೂ ಕ್ರಮಗಳನ್ನು ದೇವಸ್ಥಾನ ಆಡಳಿತ ಮಂಡಳಿ ಹಾಗೂ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಸಮರ್ಥ ರೀತಿಯಲ್ಲಿ ಕೈಗೊಂಡು ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದAತೆ ಹಾಗೂ 2016ರ ಜಾತ್ರೆಯ ಘಟನೆಯನ್ನು ನೆನಪಿಸಿ ಅಚಾತುರ್ಯಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಜಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ದೇವಸ್ಥಾನದ ಇತಿಹಾಸದ ಮಾಹಿತಿಯನ್ನು ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಿ.ತಿಪ್ಪೇಸ್ವಾಮಿಯವರಿಂದ ಮಾಹಿತಿ ಪಡೆದರು.
ಇದೆ ವೇಳೆ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್ ನ ಮಾಲೀಕರಿಗೆ ಪಾರ್ಕ್ ನಿರ್ಮಿಸಲು ಸೂಚಿಸಿ ಬರುವ ಭಕ್ತಾದಿಗಳು ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಲೇಔಟ್ ನ ಮಾಲೀಕರಿಗೆ ಸೂಚನೆ ನೀಡುವಂತೆ ತಹಶೀಲ್ದಾರ್ ಅವರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಡಿ.ವೈ.ಎಸ್.ಪಿ, ರಾಜಣ್ಣ, ದೇವಸ್ಥಾನ ಸಮಿತಿಯ ಸದಸ್ಯರುಗಳಾದ ಪಿ.ತಿಪ್ಪೇಸ್ವಾಮಿ, ದಳವಾಯಿ ಮೂರ್ತಿ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರುಗಳಾದ ಸಿ.ಟಿ.ಶ್ರೀನಿವಾಸ್, ಮುಖಂಡರು, ಕಾರ್ಯಕರ್ತರು ಹಾಗೂ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Namma Challakere Local News
error: Content is protected !!