ಚಳ್ಳಕೆರೆ ನ್ಯೂಸ್ : ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ ಕೇಂದ್ರದಲ್ಲಿ ನಡೆದ ಐದು ಗ್ಯಾರೆಂಟಿ ಯೋಜನೆಗಳ ಜಾಗೃತಿ ಸಮಾವೇಶ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ ರಘುಮೂರ್ತಿ ರವರು ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತ್ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಹಯೋಗದೊಂದಿಗೆ ತುರುವನೂರು ಹೋಬಳಿ ಕೇಂದ್ರದಲ್ಲಿ ನಡೆದ ಹೋಬಳಿ ಮಟ್ಟದ ಕರ್ನಾಟಕ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಜಾಗೃತಿ ಸಮಾವೇಶದ ಕಾರ್ಯಕ್ರಮ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾಂಗ್ರೇಸ್ ಪಕ್ಷ ನುಡಿದಂತೆ ನಡೆದಿದೆ, ಈಡೀ ದೇಶದಲ್ಲಿ ಕಾಂಗ್ರೇಸ್ ಪಕ್ಷ ತಂದ ಹತ್ತು ಹಲವು ಯೋಜನೆಗಳು ಇಂದು ಬಡ ಜನರಿಗೆ ಮಾದರಿಯಾಗಿವೆ ಅದರಂತೆ ಗ್ಯಾರಂಟಿ ಯೋಜನೆಗಳಿಂದ ಲಕ್ಷಾಂತರ ಕುಟುಂಬಗಳು ಇಂದು ನೆಮ್ಮದಿಯಾಗಿ ಜೀವನ ನಡೆಸುತ್ತಾವೆ ಆದ್ದರಿಂದ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೆವೆ ಇದರಿಂದ ಎಲ್ಲಾ ಫಲಾನುಭವಿಗಳಿಗೆ ವರದಾನವಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಗಳಾದ ನಾಗವೇಣಿ, ಕಾರ್ಯನಿರ್ವಾಹಣಾಧಿಕಾರಿ ಗಳಾದ ಅನಂತರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಸುಧಾ, ಬೆಸ್ಕಾಂ ಎ.ಈ.ಈ.ಗಳಾದ ಜಯಣ್ಣ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ದೀಪಾ ಮಹೇಶ್, ಮಂಗಳಾ ಸಿದ್ದೇಶ್, ಅನಿಲ್ ಕುಮಾರ್, ಮಾಂತಮ್ಮ ಏಕಾಂತಪ್ಪಾ, ಎಂ.ಆರ್.ಮAಜುಶ್ರೀ, ಉಪಾಧ್ಯಕ್ಷರು ಗಳಾದ ಶ್ರೀ ತಿಪ್ಪೇಸ್ವಾಮಿ, ಸುಧಾರಾಣಿ, ಸರಸ್ವತಿ ರಾಜೇಶ್, ಗಂಗಾಧರ, ರಾಮಚಂದ್ರ ರೆಡ್ಡಿ, ಸದಸ್ಯರುಗಳು, ಮುಖಂಡರುಗಳಾದ ಶುಭಾಸ್ ರೆಡ್ಡಿ, ಸಿದ್ದೇಶ್, ಮಂಜುನಾಥ, ಪವನ್ ಕುಮಾರ್, ಮೈಲಾರಪ್ಪ, ತಿಪ್ಪೇಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಫಲಾನುಭವಿಗಳು , ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.