ನಾಯಕನಹಟ್ಟಿ:: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಆರ್ ಮಾರುತೇಶ್ ಹೇಳಿದ್ದಾರೆ.
ಅವರು ಮಂಗಳವಾರ ಸಂಜೆ ಹೋಬಳಿ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಜ್ಜುಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 2023-24ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಉದ್ಘಾಟಿಸಿ ಮಾತನಾಡಿದ ಅವರು ಇಡೀ ಜಿಲ್ಲೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಸಂಭ್ರಮಿಸಡಗರದಿಂದ ಯಶಸ್ವಿಗೊಳಿಸಿದ ಕೀರ್ತಿ ಈ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಓ ದಾಸಯ್ಯ ರವರಿಗೆ ಸಲ್ಲುತ್ತದೆ. ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವಂತಹ ಕೆಲಸವನ್ನು ಅವರು ಮಾಡಿದ್ದಾರೆ ಈ ಶಾಲೆಯ ಶಿಕ್ಷಕರು ಸಹ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುತ್ತಿರುವುದು ತುಂಬಾ ಹೆಮ್ಮೆಯ ವಿಷಯ.ಎಂದರು.
ಪ್ರಾಸ್ತವಿಕವಾಗಿ ಮಾತನಾಡಿದ ಶಾಲೆಯ ಸಹ ಶಿಕ್ಷಕ ಸ್ವಾಮಿನಾಥ್. ಗಜ್ಜುಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 1936ರಲ್ಲಿ ಪ್ರಾರಂಭವಾಯಿತು ದೊಡ್ಡೇರಿಯಿಂದ ವರ್ಗಾವಣೆಗೊಂಡ ಈ ಶಾಲೆ ಗ್ರಾಮದಲ್ಲಿ 1984ರಲ್ಲಿ ಸ್ಥಾಪನೆ ಅಂದಿನಿಂದ ಶಾಲೆಯು ಹೋಬಳಿ ಮಟ್ಟದಲ್ಲಿ ಉತ್ತಮ ಶಾಲೆಯೆಂಬ ಕೀರ್ತಿಗೊಳಿಸಲು ಲೀಲಾ ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿದ್ದು ಈ ಶಾಲೆಯಲ್ಲಿ ಓದಿದಂತ ವಿದ್ಯಾರ್ಥಿಗಳು ರಾಜ್ಯದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ ಶಾಲೆಯಲ್ಲಿ ರಾಷ್ಟ್ರೀಯ ಹಬ್ಬಗಳು ಸೇರಿದಂತೆ ಸಂಭ್ರಮ ಆಚರಿಸುತ್ತಾರೆ ಎಂದರು.
.