ಚಳ್ಳಕೆರೆ : ಶ್ರೀ ಬಸವ ಜಯಂತಿಯನ್ನು ಮೇ 03 ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಅಧ್ಯಕ್ಷರು, ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದ್ದಾರೆ.
ಸದರಿ ಕಾರ್ಯಕ್ರಮವು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ರವರ ಘನ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಮತ್ತು ವೀರಶೈವ ಸಮಾಜದ ಸಂಯುಕ್ತಾಶ್ರಯದಲ್ಲಿ ಜಯಂತಿ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.
ಕಾರ್ಯಕ್ರಮಕ್ಕೆ ವೀರಶೈವ ಸಮಾಜದ ಪದಾಧಿಕಾರಿಗಳು ಹಾಗೂ ಮುಖಂಡರು, ಬಂಧುಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು,ಹಾಗೂ ನಗರಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರುಗಳು ಹಾಗೂ ಮಾಧ್ಯಮ ಮಿತ್ರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಕಟಣೆಯಲ್ಲಿ ಕೋರಿದ್ದಾರೆ.