ಚಳ್ಳಕೆರೆ: ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗವು ಆದೇಶ ಹೊರಡಿಸಿದ್ದು ನೀತಿ ಸಂಹಿತೆ ಜಾರಿಯಲ್ಲಿದೆ ಚುನಾವಣೆಗಾಗಿ ನೇಮಕಗೊಂಡ ಅಧಿಕಾರಿಗಳು ಯಾವುದೇ ಲೋಪ ದೋಷಗಳು ಆಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಚುನಾವಣಾ ಅಧಿಕಾರಿ ಆನಂದ್ ಸೂಚನೆ ನೀಡಿದರು.

ನಗರದ ತಾಲೂಕು ಪಂಚಾಯತಿ ಆವರಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಚುನಾವಣೆಗಳು ಪಾರದರ್ಶಕವಾಗಿ ನಡೆಯಲು ಎಲ್ಲ ಇಲಾಖೆಗಳ ಅಧಿಕಾರಿಗಳ ಸಹಕಾರ ಮುಖ್ಯವಾಗಿರುತ್ತದೆ ಈಗಾಗಲೇ ತಾಲೂಕಿನ ಗಡಿ ಭಾಗಗಳಲ್ಲಿ ಆರು ಚೆಕ್ ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು ವಾಹನ ತಪಾಸಣೆಯನ್ನು ನಡೆಸಲಾಗುತ್ತಿದೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಪಾಸಣೆ ನಡೆಸುವಾಗ ವಾಹನ ಚಾಲಕರೊಂದಿಗೆ ಸೌಜನ್ಯತೆಯಿಂದ ನಡೆದುಕೊಳ್ಳುವುದು ಅತ್ಯವಶ್ಯಕ ಕೆಲವು ಸಂದರ್ಭಗಳಲ್ಲಿ ಕುಟುಂಬ ಸದಸ್ಯರು ವಾಹನಗಳಲ್ಲಿ ಇದ್ದಾಗ ಮನವರಿಕೆ ಮಾಡಿಕೊಟ್ಟು ವಾಹನಗಳನ್ನು ತಪಾಸಣೆ ಮಾಡಬೇಕು ಯಾವುದೇ ಅನುಮಾನ ಬಂದಲ್ಲಿ ತಕ್ಷಣವೇ ಪೊಲೀಸ್ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.

ಚುನಾವಣೆ ಕೆಲಸಕ್ಕೆ ನಿಯೋಜಿಸಿರುವ ಅಧಿಕಾರಿಗಳು ಲೋಪದೋಷ ಎಸಗಿದ್ದಲ್ಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಅಧಿಕಾರವಿದೆ ಆದ್ದರಿಂದ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕಾಗಿರುವುದು ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿಯಾಗಿದೆ ಸಿಸಿಟಿವಿ ಕಣ್ಗಾವಲಿನಲ್ಲಿ ಎಲ್ಲಾ ಅಧಿಕಾರಿಗಳು ಒಳಪಟ್ಟಿರುವುದರಿಂದ ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ನಿಮ್ಮ ಮೇಲೆ ನಿಗಾ ಇಟ್ಟಿರುತ್ತಾರೆ ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ನಾಗಪ್ಪನಹಳ್ಳಿ ಗೇಟ್ ಬಳಿ ಅಕ್ರಮಗಳು ನಡೆಯುತ್ತಿವೆ ಎಂದು ಪೊಲೀಸರ ವಿರುದ್ಧ ಆರೋಪಗಳು ಕೇಳಿಬಂದಿದ್ದವು. ಇದನ್ನು ಕಟ್ಟನೆಟ್ಟಾಗಿ ಈ ಬಾರಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ವೃತ ನಿರೀಕ್ಷಕ ಕೆ ಕುಮಾರ್ ರವರಿಗೆ ಸೂಚನೆ ನೀಡಿದರು.

ಚುನಾವಣಾ ಸಿಬ್ಬಂದಿಗಳು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು ಚೆಕ್ ಪೋಸ್ಟ್ ಗಳಲ್ಲಿ ನೀರು ಹಾಗೂ ನೆರಳಿನ ವ್ಯವಸ್ಥೆ ವಾಹನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ತಮ್ಮ ಕರ್ತವ್ಯ ವೇಳೆ ಮುಗಿದ ನಂತರ ಆ ಜಾಗಕ್ಕೆ ಮತ್ತೊಬ್ಬ ಅಧಿಕಾರಿ ಬರುವವರೆಗೂ ಸ್ಥಳ ಬದಲಾವಣೆ ಮಾಡುವಂತಿಲ್ಲ ಪೊಲೀಸ್ ಸಿಬ್ಬಂದಿಗಿ ಎಂಟು ಗಂಟೆಯ ಕೆಲಸವನ್ನು ನಿಯೋಜಿಸಲು ಪೊಲೀಸ್ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಹಲವು ಬಾರಿ ಹೆಚ್ಚಿನ ಕಾರ್ಯ ಒತ್ತಡದಿಂದ ಪೊಲೀಸ್ ಸಿಬ್ಬಂದಿ ಚೆಕ್ ಪೋಸ್ಟ್ ಗಳಲ್ಲಿ ಕರ್ತವ್ಯ ನಿರ್ವಹಿಸುವಲ್ಲಿ ವಿಫಲವಾಗುತ್ತಿದ್ದಾರೆ ಎಂದು ದೂರುಗಳು ಬಂದಿವೆ. ಈಗಾಗಲೇ ಈ ಬಗ್ಗೆ ಪೊಲೀಸ್ ಅಧೀಕ್ಷಕರಿಗೆ ತಿಳಿಸಿದ್ದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸಹಕಾರದಿಂದ ಮಾತ್ರ ಅಕ್ರಮಗಳನ್ನು ತಡೆಗಟ್ಟಲು ಸಾಧ್ಯ ಒಬ್ಬರ ಮೇಲೆ ಒಬ್ಬರು ದೂಷಿಸಿಕೊಳ್ಳಬಾರದು ಇದೇ ವೇಳೆ ಎಚ್ಚರಿಕೆ ನೀಡಿದರು

ಅಬಕಾರಿ ಇಲಾಖೆಗೆ ಶಹಬಾಸ್ ಗಿರಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳನ್ನು ದಾಖಲಿಸಿ ಅಬಕಾರಿ ಇಲಾಖೆ ಸಿಬ್ಬಂದಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಸಹ ಅಬಕಾರಿ ಇಲಾಖೆಯಿಂದ ಉತ್ತಮ ಸ್ಪಂದನೆ ವ್ಯಕ್ತವಾಗುವ ಭರವಸೆಯಿದ್ದು ಅಧಿಕಾರಿಗಳು ಅಕ್ರಮ ಮಧ್ಯ ಮಾರಾಟ ಹಾಗೂ ಸಾಗಾಟದ ಬಗ್ಗೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ ಲೋಕಸಭಾ ಚುನಾವಣೆಯನ್ನು ತಾಲೂಕಿನಲ್ಲಿ ಯಶಸ್ವಿಗೊಳಿಸಲು ಕಾರ್ಯ ಪ್ರವೃತ್ತರಗೋಗಣ ಎಂದು ತಿಳಿಸಿದರು.

ಪೊಲೀಸ್ ವೃತ ನಿರೀಕ್ಷಕ ಕೆ ಕುಮಾರ್ ಮಾತನಾಡಿ ಲೋಕಸಭಾ ಚುನಾವಣೆ ಗಾಗಿ ಪೊಲೀಸ್ ಸಿಬ್ಬಂದಿಯನ್ನು ಈಗಾಗಲೇ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು ಚೆಕ್ ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣಿಡಲು ತಿಳಿಸಿದ್ದು ಎಲ್ಲ ಸಹಕಾರವನ್ನು ನೀಡಲಾಗುವುದು ಆಗಿಂದಾಗೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಚೆಕ್ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು ಯಾವುದೇ ಅನುಮಾನ ಬಂದಲ್ಲಿ ಅಥವಾ ಪ್ರಕರಣಗಳನ್ನು ದಾಖಲಿಸುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳು ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ರೆಹನ್ ಪಾಶ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Namma Challakere Local News
error: Content is protected !!