ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ್ದ ನಾಲ್ವರು ಶಿಕ್ಷಕರು ಅಮಾನತು.

ಚಳ್ಳಕೆರೆ : 2023-24ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು ಚಳ್ಳಕೆರೆ ತಾಲೂಕಿನ ಪರುಶುರಾಮಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದವರು, ನಕಲು ಮಾಡಲು ಸಹಕರಿಸಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಿ ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಆದೇಶಿಸಿದ್ದಾರೆ.

ಚಳ್ಳಕೆರೆ ತಾಲೂಕಿನ1. ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರೇವಣ್ಣ, 2) ಗೋಸಿಕೆರೆಯ ರಾಧಾಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಸಹ ಶಿಕ್ಷಕ ರಾಘವೇಂದ್ರ 3) ಪಿ.ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಮತ್ತು 4) ಕೊರ್ಲಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರಕಾಶ್ ಅವರು ಅಮಾನತುಗೊಂಡ ಶಿಕ್ಷಕರು.ಇಂದು (ಶನಿವಾರ) ಪರುಶುರಾಮಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದು, ಇವರೆಲ್ಲರೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದು, ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ವಿಧ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸುತ್ತಿರುವುದು ಕಂಡು ಬಂದಿದೆ. ಹಾಗೂ ನಕಲು ಮಾಡುವುದನ್ನು ತಡೆಯದೇ ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತೆ, ಬೇಜವಾಬ್ದಾರಿತನ ಮತ್ತು ಕರ್ತವ್ಯ ಲೋಪವೆಸಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಹ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

About The Author

Namma Challakere Local News
error: Content is protected !!