ಚಿತ್ರದರ‍್ಗ (ರ‍್ನಾಟಕ ವರ‍್ತೆ) ಏ.05: ಚಿತ್ರದರ‍್ಗ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶವೆಂದು ರ‍್ಕಾರ ಘೋಷಿಸಿದೆ.

ಪ್ರಸ್ತುತ ಜಿಲ್ಲೆಯಲ್ಲಿ ಬರದ ತೀವ್ರತೆ ಅಧಿಕವಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಬಹುದು. ಈ ಪರಿಸ್ಥಿತಿ ನಿಭಾಯಿಸಲು ಜಿಲ್ಲಾ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ಎಲ್ಲಾ ವಿಧದ ಹಸಿರು, ಒಣ ಹಾಗೂ ಸಂಸ್ಕರಿಸಿದ ಮೇವನ್ನು ಜಿಲ್ಲಾ ವ್ಯಾಪ್ತಿಯನ್ನು ಹೊರತುಪಡಿಸಿ ಹೊರ ಜಿಲ್ಲೆಗಳಿಗೆ ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಮಾಡಿದ್ದಾರೆ.

ಈಗಾಗಲೇ ರಾಜ್ಯ ರ‍್ಕಾರ ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡದಂತೆ ನಿಷೇಧಿಸಿ ನವೆಂಬರ್ 2023ರಲ್ಲಿಯೇ ಆದೇಶ ಹೊರಡಿಸಿದೆ. ಈ ಆದೇಶಗಳನ್ನು ಉಲ್ಲಂಘಿಸಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ಯಾವುದೇ ರೂಪದಲ್ಲಿ ಮೇವು ಸಾಗಾಣಿಕೆ ಮಾಡಿದಲ್ಲಿ, ಅಂತಹವರ ವಿರುದ್ಧ ವಿಪತ್ತು ನರ‍್ವಹಣಾ ಕಾಯ್ದೆ-2005ರ ಕಲಂ 51(ಬಿ) ಮತ್ತು ಕಲಂ 57ರ ಅಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲುವುದಾಗಿ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ

About The Author

Namma Challakere Local News
error: Content is protected !!