ಚಳ್ಳಕೆರೆ : ಚುನಾವಣೆ ಅಕ್ರಮಗಳಲ್ಲಿ ಯಾರು ಕೂಡ ಭಾಗಿಯಾಗಬಾರದು, ಇನ್ನೂ 2024ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ಸು.25 ಜನ ರೌಡಿ ಶೀಟರ್‌ಗಳಿಗೆ ಕಟ್ಟೆಚ್ಚರ ನೀಡಲಾಗಿದೆ ಎಂದು ತಳಕು ಪೊಲೀಸ್ ಠಾಣೆ ಪಿಎಸ್‌ಐ ಅಶ್ವಿನಿ ಹೇಳಿದ್ದಾರೆ.
ಅವರು ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆ ಅಂಗವಾಗಿ ನೀತಿ ಸಂಹಿತೆ ಜಾರಿಯಲ್ಲಿದೆ, ಆದ್ದರಿಂದ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಯಾವುದೇ ಅಕ್ರಮ ಮದ್ಯ ಮಾರಾಟ ಹಾಗೂ ಅನ್ಯ ಚಟುವಟಿಕೆಗಳಿಗೆ ಅಸ್ಪಾದ ನೀಡದೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸೂಕ್ಷö್ಮ ಗ್ರಾಮಗಳಲ್ಲಿ ಬೀಟ್ ಹೆಚ್ಚಿಸಲಾಗಿದೆ ಎಂದಿದ್ದಾರೆ.