ಚಳ್ಳಕೆರೆ : ಸಾಮಾನ್ಯ ನಂಬಿಕೆಯ ಪ್ರಕಾರ, ಆದಿ ಶಂಕರಾಚಾರ್ಯರು ಅದ್ವೈತ ವೇದಾಂತದ ನಂಬಿಕೆ ಮತ್ತು ತತ್ವಶಾಸ್ತ್ರದ ಬಗ್ಗೆ ಎಲ್ಲರಿಗೂ ಕಲಿಸಿದ್ದರು ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.

ನಗರದ ತಾಲೂಕು ಕಛೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಶ್ರೀ ಶಂಕರಾಚಾರ್ಯ ಜಯಂತಿಯಲ್ಲಿ ಭಾಗವಹಿಸಿ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು,

ಅವರು ಉಪನಿಷತ್ತುಗಳು, ಭಗವದ್ಗೀತೆ ಮತ್ತು ಬ್ರಹ್ಮಸೂತ್ರಗಳ ಮೂಲ ತತ್ವಗಳ ಬಗ್ಗೆ ಬೋಧನೆಗಳನ್ನು ಹರಡಿದರು. ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಲು ಅವರು ವಿವಿಧ ದೇಶಗಳಿಗೆ ಭೇಟಿ ನೀಡಿ ಭಾರತದ ನಾಲ್ಕು ಮೂಲೆಗಳಲ್ಲಿ ನಾಲ್ಕು ಮಠಗಳನ್ನು ಸ್ಥಾಪಿಸಿದರು ಎಂದರು.

ತಹಶೀಲ್ದಾರ ಎನ್.ರಘುಮೂರ್ತಿ ಮಾತನಾಡಿ, ವೇದವು ಆತ್ಮ ಮತ್ತು ಆತ್ಮಕ್ಕಿಂತ ಭಿನ್ನವಾದ ಪರಮಾತ್ಮನನ್ನು ಬೋಧಿಸುತ್ತದೆ ಎಂದು ಸಾರುತ್ತಿದ್ದವರಿಂದ ವೇದವನ್ನು ರಕ್ಷಿಸಿ ಆತ್ಮನೇ ಪರಮಾತ್ಮನು, ಜೀವನು ಮೋಹಾದಿ ಮಾಯೆಯಿಂದ ಕನಸಿನಂತೆ ಜಗತ್ತನ್ನು ಶಂಕರ ಚಾರ್ಯರು ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳಾ, ಸದಸ್ಯ ರಮೇಶ್ ಗೌಡ, ಇತರರು ಇದ್ದರು.

About The Author

Namma Challakere Local News
error: Content is protected !!