ಚಳ್ಳಕೆರೆ ನ್ಯೂಸ್ :
ಮಲ್ಲೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಒಡೆದು
ಕಳ್ಳತನ
ಚಳ್ಳಕೆರೆ ತಾಲೂಕಿನ ಚಿಕ್ಕಮಧುರೆ ಸಮೀಪ ಶ್ರೀ ಮಲ್ಲೇಶ್ವರಸ್ವಾಮಿ
ದೇವಸ್ಥಾನದಲ್ಲಿ ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳತನವಾಗಿದೆ.
ಗ್ರಾಮದ ಸಮೀಪವಿರುವ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು
ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಮುರಿದು ಹುಂಡಿಯಲ್ಲಿದ್ದ
ಹಣ ಕಳ್ಳತನ ಮಾಡಿದ್ದಾರೆ.
ಇಂದು ಬೆಳಗ್ಗೆ ಕಳ್ಳತನವಾಗಿರುವುದು
ಬೆಳಕಿಗೆ ಬಂದಿದೆ. ಗ್ರಾಮಸ್ಥರು ಪೊಲೀಸ್ ಠಾಣೆಗೆ ಮಾಹಿತಿ
ನೀಡಿದ್ದು, ಘಟನಾ ಸ್ಥಳಕ್ಕೆ ಪಿಎಸ್‌ಐ ಧರೇಪ್ಪ ಬಿ. ದೊಡ್ಡಮನಿ
ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.