ಚಳ್ಳಕೆರೆ ನ್ಯೂಸ್ :
ಹಲ್ಲೆಕೋರರನ್ನು ಬಂಧಿಸುವಂತೆ ಆಗ್ರಹಿಸಿ
ಭಜರಂಗದಳ ಪ್ರತಿಭಟನೆ
ರಾಜ್ಯದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲಿನ ಹಲ್ಲೆಯನ್ನು
ಖಂಡಿಸಿ ಇಂದು ಚಿತ್ರದುರ್ಗ ಜಿಲ್ಲಾ ಭಜರಂಗದಳದ
ಕಾರ್ಯಕರ್ತರು ಪ್ರತಿಭಟನೆ ನಡೆಸಿ ಹಲ್ಲೆಕೋರರನ್ನು ಬಂಧಿಸುವಂತೆ
ಒತ್ತಾಯಿಸಿದರು.
ನಗರದ ಶಾರದಾ ವಿದ್ಯಾ ಮಂದಿರದಿಂದ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ಬಳಿ ಬಂದು ಸರ್ಕಾರದ ವಿರುದ್ಧ ಘೋಷಣೆ
ಹಾಕಿದರು.
ನಂತರ ಅಪರ ಜಿಲ್ಲಾಧಿಕಾರಿಗೆ ಮನವಿ ನೀಡಿ, ಕೂಡಲೇ ಹಲ್ಲೆಕೋರರನ್ನು ಬಂಧಿಸಬೇಕೆಂದು ಆಗ್ರಹಿಸಿದರು.