ಚಳ್ಳಕೆರೆ ನ್ಯೂಸ್ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ
ಗೆಲುವಿಗಾಗಿ ಹಗಲು ರಾತ್ರಿ ಎನ್ನದೆ ಮತದಾರರ ಮನೆಬಾಗಿಲಿಗೆ ಹೋಗಿ ಮತಪ್ರಚಾರ ಮಾಡಿದ ಎಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಿಗೂ, ಮುಂಖಡರಿಗೂ ಮತದಾನ ಮಾಡಿದ ಮತದಾರರಿಗೂ ಧನ್ಯವಾದಗಳು ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ಹೇಳಿದ್ದಾರೆ.
ಅವರು ಲೋಕಸಭಾ ಚುನಾವಣೆ ಮುಗಿದ ನಂತರ ಮೊದಲಬಾರಿಗೆ ಚಳ್ಳಕೆರೆ ನಗರಕ್ಕೆ ಆಗಮಿಸಿ ನಗರದಲ್ಲಿ ಮುಖಂಡರನ್ನು ಭೇಟಿ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ನಗರಸಭೆ ನಾಮ ನಿರ್ದೇಶನ ಸದಸ್ಯರಾದ ನಟರಾಜ್, ಮಾಜಿ ನಗರಸಭೆ ಸದಸ್ಯರಾದ ಜಿ.ಟಿ.ಗೋವಿಂದರಾಜು, ಮಾರಣ್ಣ, ಮುಖಂಡರುಗಳಾದ ಸುನಿಲ್ ಕುಮಾರ್, ಯೋಗೇಶ್, ಧನಂಜಯ ರೆಡ್ಡಿ, ಶಿವಣ್ಣ, ವೆಂಕಟೇಶ್, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.