ಚಳ್ಳಕೆರೆ
ಚಳ್ಳಕೆರೆ ನ್ಯೂಸ್ : ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ
ಪ್ರತಿಭಟನೆ
: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ
ಪ್ರತಿಭಟನೆ
ತಾಲ್ಲೂಕಿನ ಬೋಸೆದೇವರಹಟ್ಟಿ ಗ್ರಾಮದಲ್ಲಿ ಅಕ್ರಮ ಮದ್ಯ
ಮಾರಾಟ ಹಾವಳಿ ಹೆಚ್ಚಾಗಿದ್ದು, ಕೂಡಲೇ ಇದಕ್ಕೆ ಕಡಿವಾಣ
ಹಾಕಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ
ನಡೆಸಿದರು.
ಗ್ರಾಮದ ಆಂಜನೇಯಸ್ವಾಮಿ ದೇಗುಲದ ಬಳಿ
ಜಮಾಯಿಸಿದ ಪಟ್ಟಣ ಪಂಚಾಯಿತಿ ಸದಸ್ಯರು, ಗ್ರಾಮದ ಹಿರಿಯ
ಮುಖಂಡರು, ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ
ಯುವಕರು, ಅಕ್ರಮ ಮದ್ಯದ ಹಾವಳಿಗೆ ಕಡಿವಾಣ ಹಾಕದ
ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.