ಚಳ್ಳಕೆರೆ ನ್ಯೂಸ್ :
ಬಯಲು ಸೀಮೆಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ,
ಇನ್ನೂ ಸರಿಸುಮಾರು 41 ,ಸೆಲ್ಸಿಯಸ್ ತಾಪಮಾನ ತಲುಪಿದ ಬಿಸಿಲ ಜಳ ಮನುಷ್ಯನ ಮೇಲೆ ಪ್ರಭಾವ ಬೀರುತ್ತಿದೆ.
ಅದರಂತೆ ಬಿಸಲಿನ ತಾಪಮಾನಕ್ಕೆ ವೃದ್ದೆಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕೂಡ ಜರುಗಿದೆ.
ಹೌದು ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದ ವೃದ್ದೆ ರತ್ನಮ್ಮ ಎಂಬುವವರು ಚಳ್ಳಕೆರೆ ನಗರಕ್ಕೆ ನಡೆದುಕೊಂಡು ಬಂದು ಮರು ವಾಪಸ್ಸು ಹೋಗುವಾಗ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಸಂಬಂದಿಕರು ಮಾಹಿತಿ ನೀಡಿದ್ದಾರೆ.
ಇನ್ನೂ ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಠಾಣೆಯ ಸಿಬ್ಬಂದಿ ದಾವಿಸಿ ಸ್ಥಳ ಪರೀಶಿಲನೆ ನಡೆಸಿದ್ದಾರೆ.