ವಿದ್ಯಾರ್ಥಿಗಳು ಪದವಿ ಹಂತದಲ್ಲಿ ಉತ್ತಮ ಕೌಶಲ್ಯಗಳನ್ನು ತರಬೇತಿಯ ಮೂಲಕ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತಾಗಲಿ: ಪ್ರಾಂಶುಪಾಲ ಬಿಎಸ್ ಮಂಜುನಾಥ್ .

ಚಳ್ಳಕೆರೆ ನ್ಯೂಸ್ : ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಪದವಿ ಹಂತದಲ್ಲಿಯೇ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಂಡು ಉದ್ಯೋಗ ಪಡೆಯುವಂತಾಗಲಿ ಎಂಬ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಡಿಜಿಟಲ್ ಕೌಶಲ್ಯ ಕರ್ನಾಟಕದ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆ ಕೌಶಲ್ಯ ಎಂಬ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿಎಸ್ ಮಂಜುನಾಥ್ ತಿಳಿಸಿದರು.

ಚಳ್ಳಕೆರೆ ನಗರದ ಕಾಲೇಜಿನಲ್ಲಿ ಅಂತಿಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಡಿಜಿಟಲ್ ಮಾರ್ಕೆಟಿಂಗ್ ಕುರಿತ ಕಾರ್ಯಗಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಪದವಿ ಮುಗಿಸಿದ ಮೇಲೆ ಸರ್ಕಾರಿ ಕೆಲಸ ದೊರೆಯುತ್ತದೆ ಎಂಬ ಆಶಾವಾದದೊಂದಿಗೆ ಕಾಲಹರಣ ಮಾಡುತ್ತಿದ್ದಾರೆ.

ಇದರಿಂದಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯವಾಗದೆ ನಿರುದ್ಯೋಗಿಗಳಾಗಿ ಮಾರ್ಪಾಡಾಗುತ್ತಿದ್ದಾರೆ ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ ಇದನ್ನು ಮನಗಂಡ ಸರ್ಕಾರ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲಿಯೇ ವಿವಿಧ ರೀತಿಯ ಕೌಶಲ್ಯಗಳನ್ನು ಕಲಿಸಿದರೆ ಮುಂದಿನ ದಿನಗಳಲ್ಲಿ ಸ್ವಯಂ ಉದ್ಯೋಗವನ್ನು ಮಾಡಲು ಅನುಕೂಲವಾಗುತ್ತದೆ ಎಂಬ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು‌

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ನವೀನ್ ,
ಕೃಷ್ಣಮೂರ್ತಿ ಚನ್ನಕೇಶವ ನವೀನ್ ತಿಪ್ಪೇಸ್ವಾಮಿ ಹಾಗೂ ಉಪನ್ಯಾಸಕರು ಹನುಮಂತಪ್ಪ ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!