ಚಳ್ಳಕೆರೆ ನ್ಯೂಸ್ :

ಲೋಕಸಭಾ ಚುನಾವಣೆ ಮತದಾನ ಮುಗಿದು ಕೇಲವೆ ಕೆಲವು ದಿನಗಳು ಕಳೆದಿವೆ.

ಇನ್ನೂ ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡ ಶಿಕ್ಷಕರು ಕೂಡ ಕೊಂಚ ರೀಲಿಪ್ ಮೂಡ್ ನಲ್ಲಿ ಇದ್ದಾರೆ

ಆದರೆ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ ಘೋಷಣೆ ಯಾಗುತ್ತಿದ್ದಂತೆ ಚುನಾವಣೆ ಕಣ ಭರ್ಜರಿಯಾಗಿ ರಂಗೇರಿದೆ

ಒಟ್ಟಾರೆ 2024 ರ ವರ್ಷ ಚುನಾವಣೆ ವರ್ಷವಾಗಿ ಮಾರ್ಪಟ್ಟಿದೆ.

ಅದರಂತೆ ಚಿತ್ರದುರ್ಗ ಜಿಲ್ಲೆಯ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಡಿಟಿ.ಶ್ರೀನಿವಾಸ್ ರವರ ಟಿಕೆಟ್ ಘೊಷಣೆಯಾಗುತ್ತಿದ್ದಂತೆ ಕಾಂಗ್ರೇಸ್ ಕಟ್ಟಾಳುಗಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಶಿಕ್ಷಕರಲ್ಲಿ ಮತಯಾಚನೆ ಮಾಡಲಾಗುತ್ತದೆ.

ಅದರಂತೆ ಚಳ್ಳಕೆರೆ
ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಇಂದು ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ. ಪ್ರಥಮ ದರ್ಜೆ ಕಾಲೇಜು, ಹಾಗೂ ಸರಕಾರಿ ಪಿಯು ಕಾಲೇಜು ಸಭಾಂಗಣದಲ್ಲಿ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್ ರವರ ಪರವಾಗಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್, ಪ್ರಾಂಶುಪಾಲರಾದ ಪ್ರೊ. ಬಿ.ಎಸ್.ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಧರ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ರವಿಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಗಳಾದ ರಾಮಪ್ಪ, ಮುಖಂಡರುಗಳಾದ ತಿಪ್ಪೇಸ್ವಾಮಿ, ಮೂಡಲಗಿರಿಯಪ್ಪ, ಪರಸಪ್ಪ, ಚಿತ್ತಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

About The Author

Namma Challakere Local News

You missed

error: Content is protected !!