ಚಳ್ಳಕೆರೆ ನ್ಯೂಸ್
ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು.
ಚಳ್ಳಕೆರೆ
ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಜಯಭೇರಿ ಭಾರಿಸಿದರು. ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಎದುರು 48,121 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
ಗೋವಿಂದ ಎಂ ಕಾರಜೋಳ ಇಂದು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ಆಚರಣೆ ಮಾಡಿದರು.
ಈ ವೇಳೆ ಜೆಡಿಎಸ್ ಮುಖಂಡ ಎಂ.ರವೀಶ ಕುಮಾರ್ , ಬಿಜೆಪಿ ಮುಖಂಡ ಅನಿಲ್ ಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಟಿ ತಿಪ್ಪೇಸ್ವಾಮಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರಾಮದಾಸ್ ಬಿಜೆಪಿ ತಾಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಬಿಜೆಪಿ ಮುಖಂಡ ಜಯಪಾಲಯ್ಯ ,ಬಸವರಾಜ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು ,