ಮಲ್ಲೂರಹಳ್ಳಿ ಗುಡ್ಡದ ಕಪಿಲೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ ಮುಖ್ಯ ಶಿಕ್ಷಕಿ ಸೌಭಾಗ್ಯ.
ನಾಯಕನಹಟ್ಟಿ:: ವಿಶ್ವ ಪರಿಸರ ದಿನ ಎಂದರೆ ಅ ಗಿಡ ನೆಟ್ಟು ನೀರು ಹಾಕಿದರೆ ಸಾಲದು ಗಿಡಮರಗಳನ್ನು ಬೆಳೆಸುವುದನ್ನು ರೂಢಿಸಿಕೊಳ್ಳಬೇಕು . ಎಂದು ಮುಖ್ಯ ಶಿಕ್ಷಕಿ ಸೌಭಾಗ್ಯ ಹೇಳಿದ್ದಾರೆ.
ಬುಧವಾರ ಸಮೀಪದ ಮಲ್ಲೂರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಡ್ಡದ ಕಪಿಲೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರಾಜ್ಯದಲ್ಲಿ ಅತಿ ಕಡಿಮೆ ಮಳೆ ಬೀಳುವ ಪ್ರದೇಶ ಒಂದೇ ಹಣೆಪಟ್ಟಿ ಕಟ್ಟಿಕೊಂಡಿರುವ ನಮ್ಮ ನಾಯಕನಹಟ್ಟಿ ಹೋಬಳಿಯಲ್ಲಿ ಮಳೆಗಾಲದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಬೆಳೆಸಬೇಕು ಬಿಸಿಲಿನ ತಾಪಮಾನದಿಂದ ಮುಕ್ತಿ ಕಾಣಬೇಕು ಎಂದರೆ ಗಿಡಮರಗಳನ್ನು ಬೆಳೆಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇದು ವೇಳೆ ಸಹ ಶಿಕ್ಷಕ ಎನ್. ವಿಜಯಕುಮಾರ್, ಹಾಗೂ ವಿದ್ಯಾರ್ಥಿಗಳು ಇದ್ದರು