ನಾಯಕನಹಟ್ಟಿ:: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸದಾ ಸಿದ್ಧ ನಿರುತ್ತೇನೆ ನೂತನ ಸಂಸದ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ

ಅವರು ಗುರುವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹೊರಮಠದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ
ಭಾರತೀಯ ಜನತಾ ಪಕ್ಷ ನಾಯಕನಹಟ್ಟಿ ಮಂಡಲ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಶ್ರೀ ಗೋವಿಂದ ಕಾರಜೋಳ ರವರಿಂದ ಎನ್. ಡಿ. ಎ. ಕಾರ್ಯಕರ್ತರಿಗೆ ಮತ್ತು ಮತದಾರ ಪ್ರಭುಗಳಿಗೆ ಕೃತಜ್ಞತಾ ಸಮಾರಂಭದಲ್ಲಿ ಸಸಿಗೆ ನೀರು ಹಾಕಿ ಮಾತನಾಡಿದ ಅವರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಭ್ಯರ್ಥಿ ಸೋಲುವುದು ಖಚಿತ ಅಂತ ಅನೇಕ ಸಮೀಕ್ಷಾ ಕಾರರು ಮತ್ತು ಮಾಧ್ಯಮ ಮಿತ್ರರು ಚಿಂತನೆಯನ್ನು ಮಾಡಿದರು ಎಲ್ಲ ಸಮೀಕ್ಷೆಗಳ ಉಲ್ಟಾ ಹೊಡೆದು ನನ್ನ ಗೆಲುವಿಗೆ ಕಾರಣರಾದಂತಹ ಮತದಾರರು ಮತ್ತು ಬಿಜೆಪಿ ಜೆಡಿಎಸ್ ಮುಖಂಡರು ಕಾರ್ಯಕರ್ತರು ಅಭಿಮಾನಿಗಳಿಗೆ ನಾನು ಸದಾ ಚಿರೃಣಿಯಾಗಿರುತ್ತೇನೆ.

ಎ.ಮುರುಳಿ ಮಾಡಿದಷ್ಟು ನೀರು ಭಿಕ್ಷೆ ಎಂಬ ವಾಕ್ಯವನ್ನು ನಾಡಿಗೆ ಸಾರಿದಂತಹ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕೊಟ್ಟಂತವರ ನಮ್ಮ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಗೋವಿಂದ ಎಂ ಕಾರಜೋಳ ರವರ ಗೆಲುವಾಗಿದೆ ಮುಂಬರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ. ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪ್ರತಿಯೊಬ್ಬ ಮುಖಂಡರು ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.

ಮಾಜಿ ಶಾಸಕ ನೇರಲಗುಂಟೆ ಎಸ್ ತಿಪ್ಪೇಸ್ವಾಮಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಟಿ ವೀರಭದ್ರಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಮದಾಸ್. ನಿಕಟ ಪೂರ್ವ ಅಧ್ಯಕ್ಷ ಎಂವೈಟಿ ಸ್ವಾಮಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಓಬಳೇಶ್, ಮಲ್ಲೂರಹಳ್ಳಿ ಓ. ಮಂಜುನಾಥ್, ನಾಯಕನಹಟ್ಟಿ ಮಂಡಲ ಅಧ್ಯಕ್ಷ ಈ ರಾಮರೆಡ್ಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಬೆಂಕಿ ಗೋವಿಂದಪ್ಪ, ಚನ್ನಗಾನಹಳ್ಳಿ ಮಲ್ಲೇಶ್, ಮೊಳಕಾಲ್ಮೂರು ಮಂಡಲ ಅಧ್ಯಕ್ಷ ಡಾ.ಮಂಜುನಾಥ್, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ. ಶಿವಣ್ಣ, ಜೆಡಿಎಸ್ ಮೊಳಕಾಲ್ಮೂರು ತಾಲೂಕು ಅಧ್ಯಕ್ಷ ಡಿ.ಬಿ ಕರಿಬಸಪ್ಪ ಚೌಳಕೆರೆ,ಹೊನ್ನೂರ್ ಗೋವಿಂದಪ್ಪ, ಎಸ್ಸಿ ಮೋರ್ಚಾ ಮಂಡಲ ಅಧ್ಯಕ್ಷ ಟಿ ಶಿವದತ್ತ. ತಾರಕೇಶ್, ಹಿರೇಹಳ್ಳಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಡಿ ಎಚ್ ಪರಮೇಶ್ವರಪ್ಪ, ಗುಂತಕೋಲಮನಹಳ್ಳಿ ಜೆಸಿಬಿ ತಿಪ್ಪೇಸ್ವಾಮಿ, ಮಲ್ಲೂರಹಳ್ಳಿ ಮಲ್ಲಯ್ಯ, ಅಬ್ಬೇನಹಳ್ಳಿ ಎಂ. ಶಿವಪ್ರಕಾಶ್, ಅಬ್ಬೇನಹಳ್ಳಿ ಗ್ರಾ.ಪಂ ಸದಸ್ಯ ಮಾಜಿ ಅಧ್ಯಕ್ಷ ಬಿ ಶಂಕರ್ ಸ್ವಾಮಿ. ಇನ್ನೂ ಮುಂತಾದವರು ಇದ್ದರು

About The Author

Namma Challakere Local News
error: Content is protected !!