ಚಳ್ಳಕೆರೆ ನ್ಯೂಸ್ :
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ರಿ. ತಾಲ್ಲೂಕು ಸಮಿತಿ ಚಳ್ಳಕೆರೆ ಇವರ ವತಿಯಿಂದ 4 ವರ್ಷದೊಳಗಿನ ಮಕ್ಕಳಿಗೆ ಆರ್.ಡಿ.ಪೀ.ಆರ್, ರೂಪಿಸಿರುವ ಯಾವುದೇ ಕಾರ್ಯಕ್ರಮ ಮತ್ತು 4-6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಇಲಾಖೆ ರೂಪಿಸಿರುವ ಯೋಜನೆಗಳನ್ನು ನಿಲ್ಲಿಸುವಂತೆ
ಚಳ್ಳಕೆರೆ ನಗರದ ನೆಹರು ವೃತ್ತದಲ್ಲಿ ನೂರಾರು ಅಂಗನವಾಡಿ ಕಾರ್ಯಕರ್ತರು, ಪ್ರತಿಭಟನೆ ನಡೆಸಿದರು.
ಇನ್ನೂ ಈ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ನೆಹರು ವೃತ್ತದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಎಐಟಿಯುಸಿ ತಾಲೂಕು ಸಂಚಾಲಕ ತಿಪ್ಪೇಸ್ವಾಮಿ,
ತಾಲ್ಲೂಕು ಅಧ್ಯಕ್ಷರಾದ ಇಂದಿರಮ್ಮ, ಪ್ರಧಾನ ಕಾರ್ಯದರ್ಶಿ ಗಳಾದ ಬೋರಮ್ಮ, ಖಜಾಂಚಿ ಗಂಗಮ್ಮ, ತಿಪ್ಪೇಸ್ವಾಮಿ, ನಗರಸಭೆ ಸದಸ್ಯರಾದ ರಮೇಶ್ ಗೌಡ , ಮುಖಂಡರುಗಳು, ಕಾರ್ಯಕರ್ತರು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.