ಚಳ್ಳಕೆರೆ ನ್ಯೂಸ್ :
ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಭಾಂದವರು.
ಚಳ್ಳಕೆರೆ : ಈದ್ಗಾ ಮೈದಾದಲ್ಲಿ ಮುಸ್ಲೀಂ ಸಮುದಾಯದ ಭಾಂಧವರು ಸೇರಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ನಂತರ ಶುಭಾಶಯ ವಿನಿಮಯ ಮಾಡಿಕೊಂಡರು.
ನಗರದ ವಿವಿಧ ಮಸೀದಿಗಳಲ್ಲಿ ಬೆಳಿಗ್ಗೆಯಿಂದಲೆ ಪ್ರಾರ್ಥನೆ ಸಲ್ಲಿಸಿ ಒಬ್ಬರಿಗೊಬ್ಬರು ಶುಭಾಷಯ ಕೋರಿಕೊಂಡರು.
ಇದೇ ಸಂಧರ್ಭದಲ್ಲಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ
ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಅವರು, ತ್ಯಾಗ ಬಲಿದಾನ, ಶಾಂತಿ ಸೌಹಾರ್ದತೆಗಳ ಹಬ್ಬವಾದ ಬಕ್ರೀದ್ ಹಬ್ಬವನ್ನು ಆಚರಿಸುವುದು ಸಂತಸ ಸಂದಿದೆ ಎಂದರು.
ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ನಡೆದ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭ ಕೋರಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಸೈಯದ್, ಅನ್ವರ್ ಮಾಸ್ಟರ್, ಮುಜೀಬ್, ಅತೀಕ್ ರೆಹಮಾನ್, ಸುರಕ್ಷಾ ಪಾಲಿ ಕ್ಲಿನಿಕ್ ಮಾಲೀಕ ಬಿ.ಫರೀದ್ ಖಾನ್, ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಪ್ರಸನ್ನಕುಮಾರ್, ನಗರಸಭೆ ಸದಸ್ಯರಾದ ರಮೇಶ್ ಗೌಡ, ಮುಖಂಡರು, ಕಾರ್ಯಕರ್ತರು ಹಾಗೂ ಸಮುದಾಯದವರು ಉಪಸ್ಥಿತರಿದ್ದರು.