ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬಕ್ಕೆ ಪಟ್ಟಣದ ಮುಸ್ಲಿಂ ಬಾಂಧವರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ
ನಾಯಕನಹಟ್ಟಿ:: ಜೂನ್ 17. ಪವಿತ್ರ ಬಕ್ರೀದ್ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಪಟ್ಟಣದ ಈದ್ಗಾ ಮೈದಾನದಲ್ಲಿ ಜಾಮಿಯಾ ಮಸೀದಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು.
ಸೋಮವಾರ ಪಟ್ಟಣದ ಮುಸ್ಲಿಂ ಬಾಂಧವರು ಬೆಳಗ್ಗೆ 9:00 ಗಂಟೆಗೆ ಜಾಮಿಯಾ ಮಸೀದಿ ಇಂದ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮೂಲಕ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ.
ನಮಾಜ್ ಬಳಿಕ ಒಬ್ಬರಿಗೊಬ್ಬರು ಅಪ್ಪಿಕೊಂಡು ಬಕ್ರಿದ್ ಹಬ್ಬದ ಶುಭಾಶಯ ಕೋರಿ ವಿನಿವೆಯ ಮಾಡಿಕೊಂಡರು.
ಇದೆ ವೇಳೆ ಜಾಮಿಯಾ ಮಸೀದಿ ಅಧ್ಯಕ್ಷ ಪಟ್ಟಣ ಪಂಚಾಯತಿ ಸದಸ್ಯ ಸೈಯದ್ ಅನ್ವರ್ ಮಾತನಾಡಿದರು. ಪ್ರವಾದಿ ಹಜರತ್ ಇಬ್ರಾಹಿಂ ಅವರ ತ್ಯಾಗ ಬಲಿದಾನ ಅಚಲ ದೈವ ಭಕ್ತಿ ಹಾಗೂ ಅವರ ಪುತ್ರ ಹಜರತ್ ಇಸ್ಮಾಯಿಲ್ ಅವರ ದೈವಭಕ್ತಿಯ ಸಂಕೇತವೇ ಬಕ್ರಿದ್ ಹಬ್ಬ ಆಚರಣೆಯಾಗಿದೆ ನಮ್ಮ ಮುಸ್ಲಿಂ ಬಾಂಧವರು ಬಕ್ರಿದ್ ಹಬ್ಬದಂದು ತ್ಯಾಗ ಬಲಿದಾನವನ್ನು ಸ್ಮರಿಸಲಾಗುತ್ತದೆ. ಎಂದು ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಾಮಿಯಾ ಮಸೀದಿಯ ಗುರುಗಳಾದ ಮುಪ್ತಿ ಮೊಹಮ್ಮದ್ ಸಾಹೇಬ್. ಕಾರ್ಯದರ್ಶಿ ರಫೀಕ್, ಉಪಾಧ್ಯಕ್ಷ ಎಂ ಎನ್ ಏಜಾಸ್, ಹಾಗೂ ಸರ್ವ ಸದಸ್ಯರು. ಪಟ್ಟಣದ ಮುಸ್ಲಿಂ ಬಾಂಧವರು ಇದ್ದರು.